Friday, February 20, 2026
Homeಜಿಲ್ಲಾಸುದ್ದಿಸಂಪೂರ್ಣ ಸ್ವಚ್ಛತಾ ಆಂದೋಲನ ಕಾರ್ಯಕ್ರಮದ ಸುಸ್ಥಿರತೆ ಕಾಪಾಡಲು ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ :PDO ಸಿಂಚನ ಗೌಡ

ಸಂಪೂರ್ಣ ಸ್ವಚ್ಛತಾ ಆಂದೋಲನ ಕಾರ್ಯಕ್ರಮದ ಸುಸ್ಥಿರತೆ ಕಾಪಾಡಲು ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ :PDO ಸಿಂಚನ ಗೌಡ

ಮೂಡಿಗೆರೆ: ತಾಲೂಕಿನ ಗೋಣಿಬೀಡು ಸುತ್ತಮುತ್ತ ವಿವಿಧ ಸಂಘ ಸಂಸ್ಥೆಯ ವತಿಯಿಂದ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು

ತಾಲೂಕಿನಲ್ಲಿ ಸಂಪೂರ್ಣ ಸ್ವಚ್ಛತಾ ಆಂದೋಲನ ಕಾರ್ಯಕ್ರಮದ ಸುಸ್ಥಿರತೆ ಕಾಪಾಡಲು ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯವಾಗಿದೆ ಎಂದು ಗೋಣಿಬೀಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿಂಚನ ಗೌಡ ಹಂತುರು ಅವರು ಹೇಳಿದರು.

ಸ್ವಚ್ಛತಾ ಆಂದೋಲನ ಕಾರ್ಯಕ್ರಮದಲ್ಲಿ ನೀರು ಮತ್ತು ನೈರ್ಮಲ್ಯ ಪರಿಸರದ ಕುರಿತು ಮಾತನಾಡಿದ ಅವರು, ಈಗಾಗಲೇ ಕೆಲವು ಪಂಚಾಯ್ತಿಗಳು ನಿರ್ಮಲ ಗ್ರಾಮ ಪುರಸ್ಕಾರ ಪಡೆದಿದ್ದು,

ಉಳಿದ ಗ್ರಾಮ ಪಂಚಾಯ್ತಿಗಳಲ್ಲಿ ತೀವ್ರಗತಿಯಲ್ಲಿ ಸಂಪೂರ್ಣ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ರೂಪಿಸಿ ಶೇ100ರಷ್ಟು ಪ್ರಗತಿ ಸಾಧಿಸಬೇಕಿದೆ. ಈ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಸಂಪೂರ್ಣ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಗ್ರಾ.ಪಂ.ಗಳಲ್ಲಿ ಬೀದಿ ನಾಟಕ, ಹಾಗೂ ರಥಯಾತ್ರೆ ಮೂಲಕ ಜನರಲ್ಲಿ ಅರಿವು ಮೂಡಿಸಲು ನೈರ್ಮಲ್ಯ ಮಾಸಾಚರಣೆ ಕಾರ್ಯಕ್ರಮಗಳನ್ನು ನಡೆಸಲು ಸಂಘ ಸಂಸ್ಥೆಗಳು ಕೈಜೋಡಿಸಬೇಕು ಎಂದರು.

ಗೋಣಿಬೀಡು ರೋಟರಿ ಸಂಸ್ಥೆಯ ನಿಯೋಜಿತ ಅಧ್ಯಕ್ಷ ನಯನ್ ಕುಮಾರ್ ಮಾತನಾಡಿ ಗ್ರಾಮ ಪಂಚಾಯ್ತಿಗಳಲ್ಲಿ ಘನ ತ್ಯಾಜ್ಯ ವಸ್ತುಗಳನ್ನು ಶತ್ರು ಕಸ ಹಾಗೂ ಮಿತ್ರ ಕಸಗಳಾಗಿ ಬೇರ್ಪಡಿಸಿ ವಿಲೇವಾರಿ ಮಾಡಲು ಸಿಮೆಂಟ್ ತೊಟ್ಟಿಗಳನ್ನು ಅಳವಡಿಸಬೇಕು ಎಂದರು.

ಲಯನ್ಸ್ ಸಂಸ್ಥೆಯ ಅಧ್ಯಕ್ಷ ಎಂ, ಸಿ, ನವೀನ್ ಮಾತನಾಡಿ, ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ನೈರ್ಮಲ್ಯ ಕಾಪಾಡುವುದರ ಜತೆಗೆ, ಉತ್ತಮ ಪರಿಸರ ನಿರ್ಮಾಣ ಮಾಡುವ ದಿಸೆಯಲ್ಲಿ ಗ್ರಾಮ ಪಂಚಾಯ್ತಿ ವತಿಯಿಂದ ಸಂಪೂರ್ಣ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮ ಎಲ್ಲ ಗ್ರಾಮ ಪಂಚಾಯ್ತಿಗಳಲ್ಲಿ ಯಶಸ್ವಿಯಾಗುವತ್ತ ಹೆಚ್ಚು ಗಮನಹರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ಮಾಡಿದರು.

ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ನಿಯೋಜಿತ ಕಾರ್ಯದರ್ಶಿ ಕೆ. ಸಿ ವಿನಯ್,ಗ್ರಾಮ ಪಂಚಾಯತಿ ಸದಸ್ಯೆ ಸುಪ್ರೀತಾ ನಯನ್, ಜಗದೀಶ್, ವಿನಾಯಕ ಗೆಳೆಯರ ಬಳಗ ಅಧ್ಯಕ್ಷ ಜಿ, ಎನ್,ರಘು,
ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನಾಧಿಕಾರಿ ದೀಪಕ್ ಹಾಗೂ ಸೇವಾ ಪ್ರತಿನಿಧಿಗಳು ಶೌರ್ಯ ವಿಪತ್ತು ತಂಡದ ಪ್ರತಿನಿಧಿ ಉದಯ್, ಸೇರಿದಂತೆ ಸ್ವಯಂ ಸೇವಕರು,ಸ್ವಚ್ಛತಾ ಆಂದೋಲನ ಕಾರ್ಯಕ್ರಮ ದಲ್ಲಿ ಪಾಲ್ಗೊಂಡಿದ್ದರು.

ವರದಿ :ಪುನೀತ್ ಕಡಿದಾಳು

9483811948

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!