Tuesday, August 11, 2026
Homeಜಿಲ್ಲಾಸುದ್ದಿಸಕಲೇಶಪುರ ಪ್ರವೇಶಕ್ಕೆ ಪುನೀತ್ ಕೆರೆಹಳ್ಳಿಗೆ ನಿರ್ಬಂಧ: ತವರು ಜಿಲ್ಲೆಗೆ ಬರದಿರಲು ತಡೆ ನೀಡಿದ ಜಿಲ್ಲಾಡಳಿತ

ಸಕಲೇಶಪುರ ಪ್ರವೇಶಕ್ಕೆ ಪುನೀತ್ ಕೆರೆಹಳ್ಳಿಗೆ ನಿರ್ಬಂಧ: ತವರು ಜಿಲ್ಲೆಗೆ ಬರದಿರಲು ತಡೆ ನೀಡಿದ ಜಿಲ್ಲಾಡಳಿತ

Telegram Group
Join Now

ಹಾಸನ: ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿಯವರಿಗೆ ಸಕಲೇಶಪುರ ಪ್ರವೇಶಕ್ಕೆ ನಿರ್ಬಂಧ ಹೇರಿ ಹಾಸನ ಡಿಸಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.

ಹಿಂದೂ ಹಿತರಕ್ಷಣಾ ಸಮಿತಿ ಆಯೋಜಿಸಿದ್ದ ಅಖಂಡ ಭಾರತ ಸಂಕಲ್ಪ ಯಾತ್ರೆಯಲ್ಲಿ ಪುನೀತ್ ಕೆರೆಹಳ್ಳಿ ದಿಕ್ಸೂಚಿ ಭಾಷಣ ಮಾಡುವವರಿದ್ದು. ಆದರೆ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಕಲೇಶಪುರ ಪ್ರವೇಶಕ್ಕೆ ನಿರ್ಬಂಧ ಹೇರುವಂತೆ ಜಿಲ್ಲಾಧಿಕಾರಿಗಳಿಗೆ ಎಸ್‍ಪಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ. 

ರಾಜ್ಯದ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಕೇಸ್ ಉಲ್ಲೇಖಿಸಿ ಡಿಸಿಗೆ ಮನವಿ ಮಾಡಲಾಗಿತ್ತು. ಮನವಿ ಪತ್ರದಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ಜನರ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆ ಇದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಉಲ್ಲೇಖಿಸಲಾಗಿತ್ತು.

ಎಸ್ಪಿ ಮನವಿಯಂತೆ 13-8-2025 ರಿಂದ 14 -8-2025 ರ ಬೆಳಿಗ್ಗೆ 6:00 ಗಂಟೆವರೆಗೆ ಸಕಲೇಶಪುರಕ್ಕೆ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments