ಹಾಸನ : ಜಿಲ್ಲೆಯ ಹೊಳೆನರಸೀಪುರದ ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಮತ್ತೊಂದು ಕಡೆ ದಾಖಲಾಗಿರುವ ಪ್ರಕರಣ ಸಂಬಂಧಿಸಿದಂತೆ ಮೈಸೂರು ನಗರದ ಕೆ ಆರ್ ನಗರ ಮಹಿಳೆಯ ಪ್ರಕರಣದಲ್ಲಿ ವಾದ ಮಂಡನೆ ಪೂರ್ಣವಾಗಿದ್ದು ಕೋರ್ಟ್ ಆದೇಶ ಕಾಯ್ದಿರಿಸಿದೆ.

ಪ್ರಾಸಿಕ್ಯೂಷನ್ ಪರ ಎಸ್‌ಪಿಪಿ ಬಿ.ಎನ್. ಜಗದೀಶ್ ಅಶೋಕ್ ನಾಯಕ್ ವಾದ ಮಂಡಿಸಿದ್ದರೆ ಪ್ರಜ್ವಲ್ ರೇವಣ ಪರವಾಗಿ ನಳಿನಾ ಮಾಯಗೌಡ ಪ್ರತಿ ವಾದ ಮಂಡಿಸಿದ್ದಾರೆ. ಇನ್ನು ಈ ವಾದ ಪ್ರತಿವಾದ ಆಲಿಸಿದ ಜಡ್ಜ್ ಸಂತೋಷ ಗಜಾನನ ಭಟ್ ಆದೇಶವನ್ನು ಕಾಯ್ದಿರಿಸಿದ್ದಾರೆ. ಜುಲೈ 30 ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಕಟಿಸಲಿದ್ದಾರೆ.
ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ ಇಲ್ಲ, ಅಂದ್ರೆ ಗರಿಷ್ಠ ಜೀವಾವಧಿ ಶಿಕ್ಷೆಗೆ ಒಳಗಾಗುವ ಸಾಧ್ಯತೆ ಎನ್ನಲಾಗಿದೆ
ಕಳೆದ ಒಂದು ವರ್ಷದಿಂದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ.