Saturday, August 8, 2026
Homeಕ್ರೈಮ್ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ : ಮೊದಲೇ ಡ್ಯಾಮೇಜ್‌ ಆದ ಟ್ರಂಕ್‌!

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ : ಮೊದಲೇ ಡ್ಯಾಮೇಜ್‌ ಆದ ಟ್ರಂಕ್‌!

Telegram Group
Join Now

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ನಡೆಯುತ್ತಿದೆ. ಕ್ಷೇತ್ರದಲ್ಲಿ ಚಲಾವಣೆಯಾಗಿದ್ದ ಒಟ್ಟು 1,822 ಅಂಚೆ ಮತಗಳನ್ನು ಮರು ಎಣಿಕೆಗೆ ಒಳಪಡಿಸಲಾಗುತ್ತಿದೆ.

ಈ ಮರು ಎಣಿಕೆಯು ಕ್ಷೇತ್ರದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ಹಿಂದೆ ನಡೆದ ಚುನಾವಣೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರು ಬಿಜೆಪಿಯ ಜೀವರಾಜ್ ಅವರ ವಿರುದ್ಧ ಜಯಗಳಿಸಿದ್ದರು. ಅವರ ಗೆಲುವಿನ ಅಂತರ ಕೇವಲ 201 ಮತಗಳಾಗಿತ್ತು.

ಅತಿ ಕಡಿಮೆ ಮತಗಳ ಅಂತರದಿಂದ ಜಯಗಳಿಸಿದ್ದರಿಂದ, ಬಿಜೆಪಿಯ ಜೀವರಾಜ್ ಅವರು ಅಂಚೆ ಮತಗಳ ಮರು ಎಣಿಕೆಗೆ ಕೋರ್ಟ್ ಮೊರೆ ಹೋಗಿದ್ದರು.

ನ್ಯಾಯಾಲಯದ ಆದೇಶದ ಮೇರೆಗೆ ಈ ಮರು ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಆದರೆ ಅಂಚೆ ಮತಗಳ ಮರು ಎಣಿಕೆಗೂ ಮೊದಲೇ ಮತಗಳಿರುವ ಬಾಕ್ಸ್​ ಸೀಲ್ ಓಪನ್ ಮಾಡಲಾಗಿರುವ ಆರೋಪ ಕೇಳಿಬಂದಿದೆ. 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments