Tuesday, October 13, 2026
Homeಕ್ರೈಮ್ಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ʼಗೆ ಪಾಕಿಸ್ತಾನ ಹೊಗಳುವ ಹಾಡು ಬಳಸಿ ರೀಲ್ಸ್ : ಪ್ರಮುಖ ಆರೋಪಿ ಬಂಧನ!

ಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ʼಗೆ ಪಾಕಿಸ್ತಾನ ಹೊಗಳುವ ಹಾಡು ಬಳಸಿ ರೀಲ್ಸ್ : ಪ್ರಮುಖ ಆರೋಪಿ ಬಂಧನ!

Telegram Group
Join Now

ಚಿಕ್ಕಮಗಳೂರು: ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಟಿಪ್ಪು ಸುಲ್ತಾನ್ ಕಟೌಟ್‌ಗೆ ಪಾಕಿಸ್ತಾನ್ ಪರ ಹಾಡು ಜೋಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿ ಅಫ್ರಿದ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಟಿಪ್ಪು ನಗರದ ನಿವಾಸಿ 23 ವರ್ಷದ ಅಫ್ರಿದ್ ಬಂಧಿತ ಪ್ರಮುಖ ಆರೋಪಿಯಾಗಿದ್ದಾನೆ.ಈತ ಖಾಸಗಿ ಕಾರು ಶೋರೂಮ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಈತ ‘ಚಿಕ್ಕಮಗಳೂರು ಪವರ್ ಟಿಪ್ಪು ಬಾಯ್ಸ್’ ಎಂಬ ಇನ್‌ಸ್ಟಾಗ್ರಾಮ್ ಖಾತೆಯನ್ನು ನಿರ್ವಹಿಸುತ್ತಿದ್ದು, ಅದೇ ಖಾತೆಯ ಮೂಲಕ ವಿವಾದಾತ್ಮಕ ವಿಡಿಯೋವನ್ನು ಹಂಚಿಕೊಂಡಿದ್ದ ಎಂದು ತಿಳಿದುಬಂದಿದೆ.

ಇನ್‌ಸ್ಟಾಗ್ರಾಮ್ ಖಾತೆ ನಿರ್ವಹಿಸುತ್ತಿದ್ದ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ವಿಡಿಯೋ ಶೇರ್ ಹಾಗೂ ಸ್ಟೇಟಸ್ ಹಾಕಿಕೊಂಡವರ ಮೇಲೆಯೂ ತನಿಖೆ ಮುಂದುವರಿದಿದೆ.

ಚಿಕ್ಕಮಗಳೂರಿನ ಟಿಪ್ಪು ನಗರದಲ್ಲಿ ಇತ್ತೀಚೆಗೆ 40 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಒಂದನ್ನು ನಿರ್ಮಿಸಲಾಗಿತ್ತು. ಆದರೆ, ಕೆಲವು ಕಿಡಿಗೇಡಿಗಳು ಈ ಕಟೌಟ್ ಬ್ಯಾಕ್‌ಗ್ರೌಂಡ್‌ನಲ್ಲಿ ಪಾಕಿಸ್ತಾನದ ‘ಮುಜಾಹಿದ್’ ಬೆಂಬಲಿತ ಹಾಗೂ ದೇಶವಿರೋಧಿ ಧಾಟಿಯ ಹಾಡನ್ನು ಹಾಕಿ ವಿಡಿಯೋ ಎಡಿಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಿದ್ದರು. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!