ಚಿಕ್ಕಮಗಳೂರು: ಪುಟ್ಟ ಪ್ರಕರಣಗಳನ್ನು ವ್ಯಾಜ್ಯಗಳಾಗಿ ಬೆಳೆಸಿಕೊಳ್ಳದೆ ಲೋಕ ಅದಾಲತ್‌ನಲ್ಲಿ ಬಗೆಹರಿಸಿಕೊಳ್ಳುವುದು ಸೂಕ್ತ ಆಗಲೇ ಕಕ್ಷಿದಾರರಲ್ಲಿ ಬಾಂಧವ್ಯವೂ ಉಳಿಯಲಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರೂ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್.ಹೆಗಡೆ ತಿಳಿಸಿದರು.

ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಮತ್ತು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿ ನ್ಯಾಯಾಲಯಗಳಲ್ಲಿ ಸಾವಿರಾರು ಪ್ರಕರಣಗಳು ಬಾಕಿ ಉಳಿದಿದ್ದು, ಅವೆಲ್ಲಾ ಇತ್ಯರ್ಥಗೊಳ್ಳಬೇಕೆಂದರೆ ಸಾಕಷ್ಟು ಕಾಲಾವಕಾಶ ಹಿಡಿಯಲಿದೆ. ಹಾಗಾಗಿ ಲೋಕ ಅದಾಲತ್‌ನಲ್ಲಿ ಅವುಗಳನ್ನು ಬಗೆಹರಿಸಿಕೊಳ್ಳುವುದು ಸೂಕ್ತ. ಇದರಿಂದ ಕಕ್ಷಿದಾರರು ಪಾವತಿಸಬೇಕಾದ ನ್ಯಾಯಾಲಯದ ಶುಲ್ಕ ಹಾಗೂ ಸಮಯ ಉಳಿತಾಯವಾಗಲಿದೆ ಎಂದರು.
ಹಾಗೆ ವಕೀಲರ ಸಂಘದ ಅಧ್ಯಕ್ಷ ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಸುಜೇಂದ್ರ ಮಾತನಾಡಿ, ನ್ಯಾಯ ಅರಸಿ ಬರುವ ಕಕ್ಷಿದಾರರಿಗೆ ಅತ್ಯುತ್ತಮವಾದ ತೀರ್ಪು ಸಿಗಬೇಕೆಂದರೆ ಅದು ರಾಜಿ ಸಂಧಾನದಿಂದ ಮಾತ್ರ ಸಾಧ್ಯ. ಅದು ಲೋಕಾ ಅದಾಲತ್‌ನಲ್ಲಿ ಸಿಗುವಂತೆ ಇನ್ನೆಲ್ಲೂ ನ್ಯಾಯ ಸಿಗಲು ಸಾಧ್ಯವಿಲ್ಲ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಆದ ವಿ.ಹನುಮಂತಪ್ಪ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಧಾನಕಾರರು, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಭಾನುಮತಿ, ನ್ಯಾಯಾಧೀಶರುಗಳಾದ ಪ್ರಕಾಶ್, ಮಂಜುನಾಥ, ಕುಲಕರ್ಣಿ, ಗುರುಪ್ರಸಾದ್, ರಾಘವೇಂದ್ರ, ಸುಜಾತ, ದ್ಯಾವಪ್ಪ, ಲತಾ, ಅನುರಾಧ, ಶರತ್ ಕುಮಾರ್, ನಂದಿನಿ, ವಕೀಲರು ಹಾಗೂ ಕಕ್ಷಿದಾರರು ಉಪಸ್ಥಿತರಿದ್ದರು.