Tuesday, October 6, 2026
Homeಜಿಲ್ಲಾಸುದ್ದಿBanakal: ಕರಾಟೆಯಲ್ಲಿ ರಿವರ್ ವ್ಯೂ ಸಂಸ್ಥೆ ವಿದ್ಯಾರ್ಥಿಗಳ ಸಾಧನೆ!

Banakal: ಕರಾಟೆಯಲ್ಲಿ ರಿವರ್ ವ್ಯೂ ಸಂಸ್ಥೆ ವಿದ್ಯಾರ್ಥಿಗಳ ಸಾಧನೆ!

Telegram Group
Join Now

ಕೊಟ್ಟಿಗೆಹಾರ : ಜನ್ನಾಪುರದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದ ಕರಾಟೆ ಸ್ಪರ್ಧೆಯಲ್ಲಿ ಬಣಕಲ್‌ನ ರಿವರ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಶಾಲೆಯ 6ನೇ ತರಗತಿಯ ಮಣಿಕಂಠ ಹಾಗೂ 7ನೇ ತರಗತಿಯ ಆದ್ಯ ಹೆಚ್.ಪಿ. ಕರಾಟೆ ಸ್ಪರ್ಧೆಯಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲಾ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!