ಸಕಲೇಶಪುರ: ಮಲೆನಾಡಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ ಹಾಗೂ ಕಾಡಾನೆಗಳ ಹಾವಳಿ ಹಿನ್ನೆಲೆಯಲ್ಲಿ ಕ್ಯಾನಹಳ್ಳಿ ಗ್ರಾಮಕ್ಕೆ ಸಕಲೇಶಪುರ ವಲಯ ಅರಣ್ಯಾಧಿಕಾರಿಯಾದ ಹೇಮಂತ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೌದು .. ಕ್ಯಾನಹಳ್ಳಿ ಗ್ರಾಮದ ಸುತ್ತಮುತ್ತ ಕಾಡಾನೆಗಳ ಚಲನವಲನ ಕುರಿತು ಸಾರ್ವಜನಿಕರಿಂದ ಮಾಹಿತಿ ಬಂದಿರುವ ಹಿನ್ನೆಲೆಯಲ್ಲಿ ವಲಯ ಅರಣ್ಯಾಧಿಕಾರಿಯಾದ ಹೇಮಂತ್ ಕುಮಾರ್ ಅವರು ಕಾಡಾನೆಗಳ ಗುಂಪು ಇರುವ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಇದೇ ವೇಳೆ ಹಾಸನ ಜಿಲ್ಲಾ ಬೆಳೆಗಾರರ ಸಂಘದ ನಿರ್ದೇಶಕ ಕೆ.ಜಿ. ಸುಬ್ರಮಣ್ಯ ಹಾಗೂ ಗ್ರಾಮಸ್ಥರೊಂದಿಗೆವಲಯ ಅರಣ್ಯಾಧಿಕಾರಿಗಳ ಜೊತೆ ಸಭೆ ನಡೆಸಿದ್ದು ರಾತ್ರಿ ವೇಳೆ ಅನಗತ್ಯವಾಗಿ ಹೊರಗೆ ಓಡಾಡದಂತೆ ಎಚ್ಚರಿಕೆ ನೀಡಿದ್ದು ಹಾಗೆ ಆನೆಗಳು ಕಂಡುಬಂದರೆ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕು, ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಅಧಿಕಾರಿಗಳ ಸಲಹೆ ನೀಡಿದರು.
