Saturday, August 8, 2026
Homeಜಿಲ್ಲಾಸುದ್ದಿಸಕಲೇಶಪುರ: ಮುಂದುವರೆದ ಕಾಡಾನೆಗಳ ದಾಂಧಲೆ: ರಾಜ್ಯ ಸರ್ಕಾರದ ವಿರುದ್ಧ ಸ್ಥಳೀಯರ ಹಿಡಿಶಾಪ!

ಸಕಲೇಶಪುರ: ಮುಂದುವರೆದ ಕಾಡಾನೆಗಳ ದಾಂಧಲೆ: ರಾಜ್ಯ ಸರ್ಕಾರದ ವಿರುದ್ಧ ಸ್ಥಳೀಯರ ಹಿಡಿಶಾಪ!

Telegram Group
Join Now

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ದಾಂಧಲೆ ಮುಂದುವರೆದಿದ್ದು ಅಪಾರ ಪ್ರಮಾಣದ ಬೆಳೆ ನಾಶ ಮಾಡಿದ್ದು ಮತ್ತೆ ರೈತರು ಇದರಿಂದ ಬೇಸತ್ತು ಕಂಗಾಲಾಗಿ ಹೋಗಿದ್ದಾರೆ.

ಹೌದು .. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹಾಡ್ಲಹಳ್ಳಿ, ಮೆಕ್ಕಿನ ಮನೆ ಗ್ರಾಮದಲ್ಲಿ ಕಾಡಾನೆಗಳ ಉಪಟಳ ಹೆಚ್ಚಳವಾಗಿದ್ದು ಕಾಪಿ, ಅಡಿಕೆ, ಮೆಣಸು ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಾಶ ಮಾಡಿದೆ.

ಹತ್ತಾರು ವರ್ಷಗಳಿಂದ ಕಷ್ಟಪಟ್ಟು ಬೆಳೆಸಿದ ಕಾಫಿ, ಅಡಿಕೆ ಮೆಣಸಿನ ಗಿಡಗಳನ್ನು ಕಳೆದುಕೊಂಡು ರೈತರು ಕಂಗಾಲಾಗಿದ್ದಾರೆ.

ಕಾಡಾನೆಗಳ ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯದ ರಾಜ್ಯ ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಾ ಜೀವನ ಸಾಗಿಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments