Thursday, September 17, 2026
Homeಜಿಲ್ಲಾಸುದ್ದಿSakleshpur Ganapathi: ಮೆರವಣಿಗೆಗೆ ಧ್ವನಿವರ್ಧಕ ಅನುಮತಿ ನಿರಾಕರಣೆ: ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು!

Sakleshpur Ganapathi: ಮೆರವಣಿಗೆಗೆ ಧ್ವನಿವರ್ಧಕ ಅನುಮತಿ ನಿರಾಕರಣೆ: ಗಣೇಶನನ್ನು ನಡುರಸ್ತೆಯಲ್ಲೇ ಬಿಟ್ಟು ತೆರಳಿದ ಗ್ರಾಮಸ್ಥರು!

Telegram Group
Join Now

ಹಾಸನ: ಗಣಪತಿ ವಿಸರ್ಜನೆ  ವೇಳೆ ಧ್ವನಿವರ್ಧಕ ಬಳಕೆಗೆ ಪೊಲೀಸರು ಅನುಮತಿ ನೀಡದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮೆರವಣಿಗೆಯನ್ನು ಅರ್ಧಕ್ಕೆ ನಿಲ್ಲಿಸಿ ತೆರಳಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಲವು ವರ್ಷಗಳಿಂದ ಮಾರನಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ಗಣಪತಿಯನ್ನು ಪ್ರತಿಷ್ಠಾಪಿಸಿಕೊಂಡು ಬರುತ್ತಿದ್ದಾರೆ. ಈ ವರ್ಷವೂ ಗೌರಿ-ಗಣಪತಿಯನ್ನು ಪ್ರತಿಷ್ಠಾಪಿಸಿ ಇಂದು ಅದ್ಧೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲು ಗ್ರಾಮಸ್ಥರು ತೆರಳುತ್ತಿದ್ದರು.

ಒಂದು ಟ್ರ್ಯಾಕ್ಟರ್‌ನಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಿಕೊಂಡು ಗ್ರಾಮಸ್ಥರು ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಧ್ವನಿವರ್ಧಕ ಬಳಕೆಗೆ ಅನುಮತಿ ನೀಡುವುದಿಲ್ಲ ಎಂದು ಪೊಲೀಸರು ಮೆರವಣಿಗೆಗೆ ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ.

ಪೊಲೀಸರ ಕ್ರಮಕ್ಕೆ ಕೆರಳಿದ ಗ್ರಾಮಸ್ಥರು ಮೆರವಣಿಗೆಯನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. ಬಳಿಕ ನೂರಾರು ಗ್ರಾಮಸ್ಥರು ಸ್ಥಳದಿಂದ ತೆರಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!