ಸಕಲೇಶಪುರ: ತಾಲೂಕಿನ ಹೆತ್ತೂರು ಹೋಬಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಲೈನ್ ಮ್ಯಾನ್ ಕೊರತೆ ಇದ್ದು ಸಿಬ್ಬಂದಿ ನೇಮಿಸಲು ಕರವೇ ಕಾರ್ಯಕರ್ತರು ಉಪಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಈ ಕುರಿತು ಕರವೇ. ಸಕಲೇಶಪುರ ತಾಲೂಕು ಅಧ್ಯಕ್ಷ ಗಗನ್ ಹಾಡ್ಲಹಳ್ಳಿ ಮಾತನಾಡಿ, ಹೆತ್ತೂರು ಹೋಬಳಿಯ ವ್ಯಾಪ್ತಿಯಲ್ಲಿ ಒಟ್ಟು 35 ಗ್ರಾಮಗಳು ಇದ್ದು, ಈ ಪ್ರದೇಶದಲ್ಲಿ ವಿದ್ಯುತ್ ಸಂಬಂಧಿತ ತಾಂತ್ರಿಕ ಸಮಸ್ಯೆಗಳು ಸಂಭವಿಸುವ ಸಂದರ್ಭಗಳಲ್ಲಿ ಸ್ಥಳೀಯ ಜನತೆಗೆ ತ್ವರಿತ ಪರಿಹಾರ ಲಭ್ಯವಿರುವುದಿಲ್ಲ ಈ ಕಾರಣಕ್ಕೆ, ಲೈನ್‌ಮನ್‌ಗಳ ಕೊರತೆ ಕಾರಣವಾಗಿದ್ದು, ಜನಸಾಮಾನ್ಯರು ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ.
ಗಾಢವಾಗಿ ಮಳೆಯಾಗುವ ಕಾಲದಲ್ಲಿ ಅಥವಾ ತುರ್ತು ಪರಿಸ್ಥಿತಿಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳ್ಳುವ ಸ್ಥಿತಿಯಲ್ಲಿ ಲೈನ್ ಮ್ಯಾನ್ʼಗಳು ತಕ್ಷಣ ಸ್ಥಳಕ್ಕೆ ಆಗಮಿಸದ ಕಾರಣ ಸಮಸ್ಯೆಗಳು ದೀರ್ಘವಾಗುತ್ತವೆ. ಈ ಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸಬೇಕೆಂದು ಮನವಿ ಮಾಡಿದರು.
ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಗ್ರಾಮೀಣ ಜನತೆಗೆ ಉತ್ತಮ ಸೇವೆ ಒದಗಿಸಲು ಸಹಕಾರ ನೀಡುವಂತೆ ವಿನಂತಿಸುತ್ತೇವೆ. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹೆತ್ತೂರು ಹೋಬಳಿಯ ನಾಗರಿಕರೊಂದಿಗೆ ಸೇರಿಕೊಂಡು ತಮ್ಮ ಕಚೇರಿಯ ಮುಂದೆ ಉಗ್ರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಸಾಥ್ ನೀಡಿದರು.