ಕೊಪ್ಪ : ತಾಲೂಕಿನ ಅಮ್ಮಡಿ ಬಳಿ ನಾರ್ಬರ್ಟ್ ಶಾಲೆಯ ವಾಹನ ಅಪಘಾತ ಸಂಭವಿಸಿದ್ದು ಈ ವೇಳೆ ಶಾಲಾ ವಾಹನದ ಚಾಲಕ ಲಕ್ಷ್ಮಣ್ ಬಸವಾನಿ ಮೃತಪಟ್ಟಿದ್ದಾರೆ.ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಸಂಜೆ ಶಾಲೆ ಮುಗಿದ ಬಳಿಕ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆದರೆ ಚಾಲಕ ವಾಹನದೊಳಗೆ ಸಿಲುಕಿಕೊಂಡಿದ್ದು, ಅವರನ್ನು ಹೊರತೆಗೆಯಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಆದರೆ ದುರದೃಷ್ಟವಶಾತ್ ಚಾಲಕ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದಾರೆ.
