ಮೂಡಿಗೆರೆ: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆ ಸುರಿಯುತ್ತಿರುವ ಹಿನ್ನೆಲೆ ಮೂಡಿಗೆರೆ ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ ತಾಲೂಕು ದಂಡಾಧಿಕಾರಿ ಶ್ರೀಮತಿ ಅಶ್ವಿನಿ ಅವರು ಮಾಹಿತಿ ನೀಡಿದ್ದಾರೆ
ಭಾನುವಾರ ಮಧ್ಯಾಹ್ನದಿಂದ ಮಲೆನಾಡಲ್ಲಿ ಭಾರೀ ಗಾಳಿ ಸಹಿತ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮೂಡಿಗೆರೆ ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿ ಮೂಡಿಗೆರೆ ತಹಶೀಲ್ದಾರ್ ಅಶ್ವಿನಿ ಆದೇಶ ಹೊರಡಿಸಿದ್ದಾರೆ.
ಭಾರೀ ಗಾಳಿಗೆ ಮರ ಬಿದ್ದು ಮಲೆನಾಡಿನಾದ್ಯಂತ ತೀವ್ರ ಅನಾಹುತ ಸಂಭವಿಸಿದೆ. ರಸ್ತೆಗೆ ಬೃಹತ್ ಮರಗಳು ಬಿದ್ದು, ಹತ್ತಾರು ಗ್ರಾಮಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು ಮಲೆನಾಡ ಹತ್ತಾರು ಹಳ್ಳಿಗಳು ಕತ್ತಲಲ್ಲಿ ಮುಳುಗಿದೆ. ಭಾರಿ ಮಳೆ ಜೊತೆ ಬೀಸುತ್ತಿರುವ ರಣ ಗಾಳಿಗೆ ಮಲೆನಾಡಿಗರು ಕಂಗಾಲಾಗಿದ್ದಾರೆ.
