ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ, ಪ್ರವಾಹ ಹಾಗೂ ಭೂಕುಸಿತದ ಆತಂಕದ ಹಿನ್ನೆಲೆಯಲ್ಲಿ ಜಿಲ್ಲೆಯ ಶೃಂಗೇರಿ ಮತ್ತು ಕೊಪ್ಪ ತಾಲ್ಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಸೋಮವಾರ (ಆಗಸ್ಟ್ 3) ರಜೆ ಘೋಷಿಸಿ ಸಂಬಂಧಿತ ತಾಲ್ಲೂಕು ತಹಶೀಲ್ದಾರ್‌ಗಳು ಆದೇಶ ಹೊರಡಿಸಿದ್ದಾರೆ.

ನಿರಂತರ ಮಳೆಯಿಂದ ಹಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ನಿಲ್ಲುವ ಸಾಧ್ಯತೆ, ಸಂಚಾರ ಅಡಚಣೆ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಶಾಲಾ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಇಂದು ರಜೆ ಘೋಷಿಸಲಾಗಿದೆ.
