Wednesday, November 11, 2026
Homeಕ್ರೈಮ್ಮೂಡಿಗೆರೆ ಸುತ್ತಮುತ್ತಲಿನ ದೇವಾಲಯಗಳಲ್ಲಿ ಸರಣಿ ಕಳ್ಳತನ, ಪ್ರಕರಣ ಭೇದಿಸಿದ ಪೊಲೀಸರು: ಅಸ್ಸಾಂ ಮೂಲದ ಕಾರ್ಮಿಕರು ವಶಕ್ಕೆ

ಮೂಡಿಗೆರೆ ಸುತ್ತಮುತ್ತಲಿನ ದೇವಾಲಯಗಳಲ್ಲಿ ಸರಣಿ ಕಳ್ಳತನ, ಪ್ರಕರಣ ಭೇದಿಸಿದ ಪೊಲೀಸರು: ಅಸ್ಸಾಂ ಮೂಲದ ಕಾರ್ಮಿಕರು ವಶಕ್ಕೆ

Telegram Group
Join Now

ಮೂಡಿಗೆರೆ: ತಾಲ್ಲೂಕಿನ ಮಾಕೋನಹಳ್ಳಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ದೇವಾಲಯಗಳಲ್ಲಿ ಬಾಗಿಲು ಒಡೆದು ಹುಂಡಿ ಹಣ ಹಾಗೂ ದೇವರ ಮೈಮೇಲಿದ್ದ ಬೆಳ್ಳಿ ಆಭರಣಗಳನ್ನು ಕಳವು ಮಾಡುತ್ತಿದ್ದ ಅಸ್ಸಾಂ ಮೂಲದ ಇಬ್ಬರು ಕಾರ್ಮಿಕರನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದಾರೆ.

ಮಾಕೋನಹಳ್ಳಿ ಗ್ರಾಮದ ಶನೇಶ್ವರ ದೇವಸ್ಥಾನ, ತುದಿಯಾಲ ಗ್ರಾಮದ ಅಮ್ಮನವರ ಗುಡಿ ಸೇರಿದಂತೆ ಒಟ್ಟು ನಾಲ್ಕು ದೇವಾಲಯಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸರಣಿ ಕಳ್ಳತನ ನಡೆದಿತ್ತು. ದೇವಸ್ಥಾನಗಳ ಬಾಗಿಲು ಮುರಿದು ಒಳನುಗ್ಗುತ್ತಿದ್ದ ಕಳ್ಳರು ಹುಂಡಿಯಲ್ಲಿದ್ದ ಹಣ ಹಾಗೂ ದೇವರ ಆಭರಣಗಳನ್ನು ದೋಚಿ ಪರಾರಿಯಾಗುತ್ತಿದ್ದರು. ಈ ಸಂಬಂಧ ಮಾಕೋನಹಳ್ಳಿ ಗ್ರಾಮದ ಕೃಷ್ಣೇಗೌಡ ಎಂಬುವವರು ಮೂಡಿಗೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಚುರುಕುಗೊಳಿಸಿ ಕಳ್ಳರ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು. ಇದೀಗ ಕೃತ್ಯದಲ್ಲಿ ಭಾಗಿಯಾಗಿದ್ದ ಇಸ್ಲಾಂ ಮತ್ತು ಬಾಬರ್ ಎಂಬ ಅಸ್ಸಾಂ ಮೂಲದ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರು ಮಾಕೋನಹಳ್ಳಿ ಗ್ರಾಮದ ಎಂ.ಬಿ. ಮಂಜುನಾಥಗೌಡ ಅವರ ತೋಟದ ಕೂಲಿ ಕಾರ್ಮಿಕರ ಲೈನ್‌ನಲ್ಲಿ ಕಳೆದ ಐದಾರು ತಿಂಗಳಿನಿಂದ ವಾಸವಾಗಿದ್ದರು ಎನ್ನಲಾಗಿದೆ. ರಾತ್ರಿ ವೇಳೆ ಕಾಲ್ನಡಿಗೆಯಲ್ಲಿ ಗ್ರಾಮಕ್ಕೆ ತೆರಳಿ ದೇವಸ್ಥಾನಗಳ ಬಾಗಿಲು ಒಡೆದು ಗರ್ಭಗುಡಿ ಪ್ರವೇಶಿಸಿ ಕಳ್ಳತನ ಮಾಡುತ್ತಿದ್ದರು. ಕಳವು ಮಾಡಿದ್ದ ಬೆಳ್ಳಿ ಆಭರಣಗಳನ್ನು ತೋಟವೊಂದರಲ್ಲಿ ಮಣ್ಣಿನಡಿ ಬಚ್ಚಿಟ್ಟಿದ್ದ ಸಂಗತಿಯೂ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ನಾಲ್ಕು ದೇವಾಲಯಗಳಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಬಂಧಿಸಿರುವ ಮೂಡಿಗೆರೆ ಪೊಲೀಸರ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ದೇವಸ್ಥಾನಗಳ ಆವರಣದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!