Tuesday, February 10, 2026
Homeಜಿಲ್ಲಾಸುದ್ದಿಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ : ಕೆ.ಜೆ.ಜಾರ್ಜ್!

ಪರಿಸರಕ್ಕೆ ಹಾನಿಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ : ಕೆ.ಜೆ.ಜಾರ್ಜ್!

ಚಿಕ್ಕಮಗಳೂರು : ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರ ವನ್ಯಜೀವಿ ಮಂಡಳಿ ಅನುಮೋದನೆ ನೀಡಿದ್ದು, ಸ್ಥಳೀಯರ ಮನವೊಲಿಸಿ ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿಗಳೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಇಲ್ಲಿನ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಆ ಭಾಗದ ಜನರಿಗೆ ಯಾವುದೇ ಆತಂಕ ಬೇಡ. ಪರಿಸರದ ಮೇಲೆ ದುಷ್ಪರಿಣಾಮ ಬೀರದಂತೆ ಯೋಜನೆ ಜಾರಿಗೊಳಿಸಲಾಗುವುದು. ಪರಿಸರದ ಮೇಲೆ ದೊಡ್ಡ ಮಟ್ಟದಲ್ಲಿ ಹಾನಿಯಾಗುವುದಿಲ್ಲ. ಈ ವಿಚಾರವನ್ನು ಜನರಿಗೆ ತಿಳಿಸಿ ಅವರ ಮನವೊಲಿಸಲಾಗುವುದು ಎಂದರು.

2000 ಮೆಗಾವ್ಯಾಟ್ ಸಾಮರ್ಥ್ಯ ಈ ಯೋಜನೆ ಅನುಷ್ಠಾನಕ್ಕೆ ಕೇವಲ ಕೇವಲ 120 ಎಕರೆ ಜಮೀನು ಸಾಕು.ಇದರಲ್ಲಿ 50 ಎಕರೆ ಖಾಸಗಿಯಾಗಿದ್ದು, ಉಳಿದಂತೆ ಕಂದಾಯ ಮತ್ತು ಅರಣ್ಯ ಮತ್ತು ಕಂದಾಯ ಭೂಮಿಯನ್ನು ಬಳಸಿಕೊಳ್ಳಲಾಗುತ್ತದೆ. ಖಾಸಗಿಯವರ ಭೂಮಿಗೆ ಸೂಕ್ತ ಪರಿಹಾರ ನೀಡಲಾಗುವುದು. ಯೋಜನೆಗೆ ಬಳಸಿಕೊಳ್ಳುವ ಅರಣ್ಯಕ್ಕೆ ಬದಲಾಗಿ ಅರಣ್ಯ ಇಲಾಖೆಗೆ ಅರಣ್ಯೀಕರಣಕ್ಕೆ ಬೇಕೆ ಕಡೆಭೂಮಿ ಕಡೆಭೂಮಿ ನೀಡಲಾಗುವುದು ಎಂದು ತಿಳಿಸಿದರು

ಪಂಪ್ಡ್ ಸ್ಟೋರೇಜ್ ಯೋಜನೆಗೆ ಹೊಸ ಜಲಾಶಯಗಳನ್ನು ನಿರ್ಮಿಸುವುದರಿಂದ ನದಿ ಹರಿವಿಗೂ ಅಡ್ಡಿಯಾಗುವುದಿಲ್ಲ. ಗೇರುಸೊಪ್ಪದಿಂದ ಪೈಪ್ ಲೈನ್ ಮೂಲಕ ನೀರನ್ನು ಮೇಲಿನ ಹಂತದಲ್ಲಿರುವ ತಲಕಳಲೆ ಜಲಾಶಯಕ್ಕೆ ಪಂಪ್ ಮಾಡಲಾಗುತ್ತದೆ. ಈ ಪೈಲ್ ಲೈನ್ ಗಳು ನೆಲದ ಒಳಗೆ ಇರುತ್ತದೆ. ಬಹುತೇಕ ನಿರ್ಮಾಣಗಳು ಸುರಂದ ಒಳಗೇ ಇರುವುದರಿಂದ ಯೋಜನೆಯಿಂದ ದೊಡ್ಡಮಟ್ಟದಲ್ಲಿ ಪರಿಸರಕ್ಕೆ ಹಾನಿಯಾಗುವದಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಯೋಜನೆ ಅನುಷ್ಠಾನವಾದಲ್ಲಿ ಕಡಿಮೆ ಖರ್ಚಿನಲ್ಲಿ ಹೆಚ್ಚುವರಿಯಾಗಿ 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದು ಮತ್ತು ಅಗತ್ಯ ಸಂದರ್ಭದಲ್ಲಿ ಗ್ರಾಹಕರಿಗೆ ಪೂರೈಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.









RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!