Tuesday, February 10, 2026
Homeಕ್ರೈಮ್ಶಿವಮೊಗ್ಗ: ಕೌಟುಂಬಿಕ ಕಲಹ: ಪ್ರತಿಷ್ಠಿತ ವೈದ್ಯೆ, ಮಗ ನೇಣಿಗೆ ಶರಣು!

ಶಿವಮೊಗ್ಗ: ಕೌಟುಂಬಿಕ ಕಲಹ: ಪ್ರತಿಷ್ಠಿತ ವೈದ್ಯೆ, ಮಗ ನೇಣಿಗೆ ಶರಣು!

ಶಿವಮೊಗ್ಗ: ಜಿಲ್ಲೆಯ  ಅಶ್ವಥ್ ನಗರ ಬಡಾವಣೆಯಲ್ಲಿ ಪ್ರತಿಷ್ಠಿತ ವೈದ್ಯೆ ಮತ್ತು ಅವರ ಮಗ ಒಂದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಗರದಲ್ಲಿ ತಾಯಿ ಮತ್ತು ಪ್ರಸೂತಿ ಆಸ್ಪತ್ರೆಯನ್ನು ನಡೆಸುತ್ತಿದ್ದ ಡಾ. ಜಯಶ್ರೀ (55) ಹಾಗೂ ಅವರ ಮಗ ಆಕಾಶ್ (34) ಆತ್ಮಹತ್ಯೆಗೆ ಶರಣಾದವರು. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪ್ರಕರಣ ದಾಖಲಿಸಿಕೊಂಡು, ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಡಾ. ಜಯಶ್ರೀ ಅವರು ತಮ್ಮ ಮನೆಯ ಕೆಳ ಅಂತಸ್ತಿನಲ್ಲಿ ಪ್ರಾಣ ಕಳೆದುಕೊಂಡಿದ್ದರೆ, ಪುತ್ರ ಆಕಾಶ್ ಮೊದಲ ಮಹಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ತಾಯಿ ಮತ್ತು ಮಗ ಇಬ್ಬರೂ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂಬ ಮಾಹಿತಿಯಿದೆ. ಅದರಲ್ಲಿ ತಮ್ಮ ಹೆಸರಿನಲ್ಲಿದ್ದ ಆಸ್ತಿಯನ್ನು ಸೊಸೆಯ ಹೆಸರಿಗೆ ಬರೆದಿಟ್ಟು ಬಳಿಕ ಈ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೌಟುಂಬಿಕ ಸಮಸ್ಯೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ. 15 ತಿಂಗಳ ಹಿಂದೆ ಮೃತ ಆಕಾಶ್ ಅವರ ಮೊದಲ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕಳೆದ ಮೇ ತಿಂಗಳಲ್ಲಿ ಆಕಾಶ್ ಅವರಿಗೆ ಎರಡನೇ ಮದುವೆಯಾಗಿತ್ತು.

ಮೂಲಗಳ ಪ್ರಕಾರ, ಆಕಾಶ್‌ ರಿಯಲ್ ಎಸ್ಟೇಟ್‌ನಲ್ಲಿ ತಾನು ಹಣ ತೊಡಿಸಬೇಕು ಎಂದು ಅದಕ್ಕಾಗಿ ನನಗೆ ಹಣ ಬೇಕು ಎಂದು ಕೇಳುತ್ತಿದ್ದ ಎನ್ನಲಾಗುತ್ತಿದೆ. ಇದಕ್ಕೋಸ್ಕರನೇ ತಾಯಿ ಮತ್ತು ಮಗನ ಮಧ್ಯೆ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು. ಇದು ಇತ್ತೀಚಿಗೆ ಮದುವೆಯಾಗಿ ಬಂದ ನವ್ಯಗೆ ಕೂಡ ಮಾಮೂಲಾಗಿತ್ತು. ಆದರೆ ಈ ಜಗಳ ವಿಕೋಪಕ್ಕೆ ಹೋಗಿದ್ದು ಅದು ಈ ಆತ್ಮಹತ್ಯೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!