Sunday, August 16, 2026
Homeಜಿಲ್ಲಾಸುದ್ದಿಶಿವಮೊಗ್ಗ: ಲಾರಿ-ಕಾರಿನ ನಡುವೆ ಭೀಕರ ಅಪಘಾತ: ಓರ್ವ ಸಾವು!

ಶಿವಮೊಗ್ಗ: ಲಾರಿ-ಕಾರಿನ ನಡುವೆ ಭೀಕರ ಅಪಘಾತ: ಓರ್ವ ಸಾವು!

Telegram Group
Join Now

ಶಿವಮೊಗ್ಗ: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯ ಆಗಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪದ ಬೇಗುವಳ್ಳಿಯಲ್ಲಿ ನಡೆದಿದೆ.

ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ಸಾಗುತ್ತಿದ್ದ ಲಾರಿ ಹಾಗೆ ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು ಆ ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಈ ಪೈಕಿ ಓರ್ವ ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಮಾಳೂರು ಠಾಣೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments