Tuesday, August 11, 2026
Homeಜಿಲ್ಲಾಸುದ್ದಿಹಾಸನಾಂಬೆ ದರ್ಶನ ಪಡೆದ ಶಿವರಾಜ್‌ಕುಮಾರ್, ರಿಷಬ್ ಶೆಟ್ಟಿ ದಂಪತಿ

ಹಾಸನಾಂಬೆ ದರ್ಶನ ಪಡೆದ ಶಿವರಾಜ್‌ಕುಮಾರ್, ರಿಷಬ್ ಶೆಟ್ಟಿ ದಂಪತಿ

Telegram Group
Join Now

ಹಾಸನ: 10ನೇ ದಿನವೂ ಹಾಸನಾಂಬ ದೇವಿ ಸಾರ್ವಜನಿಕ ದರ್ಶನಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ. ನಟ ಶಿವರಾಜ್ ಕುಮಾರ್ ದಂಪತಿ ಕೂಡ ದೇವಿ ದರ್ಶನ ಪಡೆದಿದ್ದಾರೆ. ಇತ್ತ ಕಾಂತಾರ-1 ಸಕ್ಸಸ್ ಬೆನ್ನಲ್ಲೇ ರಿಷಬ್ ಶೆಟ್ಟಿ ದಂಪತಿ ಕೂಡ ವಿಶೇಷ ಪೂಜೆ ಸಲ್ಲಿಸಿ ದೇವಿ ದರ್ಶನ ಪಡೆದರು.

ಲೋಕಾಯುಕ್ತ ಬಿ.ಎಸ್.ಪಾಟೀಲ್, ಮಾಜಿ ಸಚಿವೆ ಉಮಾಶ್ರೀ, ದೇವೇಗೌಡರು ಪುತ್ರಿ ಅನಸೂಯ ಕೂಡ ದೇವಿ ದರ್ಶನ ಪಡೆದಿದ್ದಾರೆ. ಇಂದು ಭಾನುವಾರ ಆದರೂ ಧರ್ಮ ದರ್ಶನ ಸಾಲಿನಲ್ಲಿ ಭಕ್ತರ ಸಂಖ್ಯೆ ಇಳಿಕೆಯಾಗಿದೆ. 1 ಸಾವಿರ, 300 ರೂ ಟಿಕೆಟ್ ಸಾಲುಗಳು ಸಂಪೂರ್ಣ ಖಾಲಿಯಾಗಿವೆ. 

ಕಳೆದ ಎರಡು ದಿನಗಳಿಂದ ಭಾರೀ ಭಕ್ತರ ಆಗಮನದಿಂದ ಹೆಚ್ಚಾಗಿದ್ದು, ದರ್ಶನಕ್ಕೆ ಬರಲು ಭಕ್ತರ ಹಿಂದೇಟು ಹಾಕಿದ್ದಾರೆ. ಜೊತೆಗೆ ವಿಶೇಷ ಬಸ್‌ಗಳ ಸಂಖ್ಯೆ ಕೂಡ ಕಡಿಮೆ ಮಾಡಿದ ಕಾರಣ ಭಕ್ತರ ಸಂಖ್ಯೆ ತಗ್ಗಿದೆ. ಹಾಸನಾಂಬ ದೇವಾಲಯದಲ್ಲಿಯೇ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಮೊಕ್ಕಾಂ ಹೂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments