Tuesday, August 11, 2026
Homeಕ್ರೈಮ್ಹಾಸನ: ಪ್ರಜ್ವಲ್‌ ರೇವಣ್ಣ ರೂಂನಲ್ಲಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ ಎಸ್‌ಐಟಿ

ಹಾಸನ: ಪ್ರಜ್ವಲ್‌ ರೇವಣ್ಣ ರೂಂನಲ್ಲಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ ಎಸ್‌ಐಟಿ

Telegram Group
Join Now

ಹಾಸನ: ಹಾಸನ ಪೆನ್‌ಡ್ರೈವ್‌ ಪ್ರಕರಣ ಸಂಬಂಧ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಮೇ 31 ರಂದು ಎಸ್‌ಐಟಿ ಮುಂದೆ ಹಾಜರಾಗ್ತೀನಿ ಎಂದು ಹೇಳಿದ ಬೆನ್ನಲ್ಲೇ ಇತ್ತ ಎಸ್‌ಐಟಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲು ಮುಂದಾಗಿದೆ. ಪ್ರಜ್ವಲ್‌ ಬೆಂಗಳೂರಿಗೆ ಬರುವ ದಿನ ಹತ್ತಿರವಾಗ್ತಿದ್ದಂತೆ ಎಸ್ ಐಟಿ ತಂಡ ತನಿಖೆ ಚುರುಕುಗೊಳಿಸಿದೆ. ಹಾಸನದ ಪ್ರಜ್ವಲ್‌ ನಿವಾಸದಲ್ಲಿ ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ.

ಹೌದು ಪ್ರಜ್ವಲ್‌ ರೇವಣ್ಣರ ಹಾಸನ  ನಗರದ ಆರ್.ಸಿ. ರಸ್ತೆಯಲ್ಲಿರುವ ನಿವಾಸಕ್ಕೆ ಎಸ್‌ಐಟಿ ಮತ್ತು ಎಫ್‌ಎಸ್‌ಎಲ್‌ ತಂಡ ಭೇಟಿ ನೀಡಿ ಸತತ 10 ಗಂಟೆಗಳ ಕಾಲ ಪರಿಶೀಲನೆ ನಡೆಸಿದೆ. ಪ್ರಜ್ವಲ್ ಮಲಗುತ್ತಿದ್ದ ರೂಂನಲ್ಲಿರುವ  ಹಾಸಿಗೆ, ದಿಂಬು, ಹೊದಿಕೆಯನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ತೆರಳಿದ್ದಾರೆ. ಇನ್ನು ಮೊನ್ನೆಯಷ್ಟೇ ವಿಡಿಯೋ ಮೂಲಕ ಮೇ 31ರ ಬೆಳಗ್ಗೆ 10:30ಕ್ಕೆ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗ್ತೀನಿ ಎಂದು ಪ್ರಜ್ವಲ್‌ ರೇವಣ್ಣ ಹೇಳಿದ್ದು, ಇತ್ತ ಎಸ್‌ಐಟಿ ಪ್ರಜ್ವಲ್‌ ಬಂಧನಕ್ಕೆ ಸಿದ್ಧತೆ ನಡೆಸುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments