ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐಟಿ ತನಿಖೆ ಚುರುಕುಗೊಳಿಸಿದ್ದು ನೇತ್ರಾವತಿ ಸ್ನಾನಘಟ್ಟದ ಬಳಿ ಸ್ಥಳ ಮಜರ ಪ್ರಕ್ರಿಯೆ ನಡೆಯುತ್ತಿದೆ.
ಎಸ್.ಐ.ಟಿ ಅಧಿಕಾರಿಗಳು ಹಾಗೂ ದೂರುದಾರ ಬಿಗಿ ಪೊಲೀಸ್ ಭದ್ರತೆಯಲ್ಲಿ ಧರ್ಮಸ್ಥಳ ಗ್ರಾಮ ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ಥಳ ಮಹಜರು ನಡೆಸುತ್ತಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಸ್ಥಳದಲ್ಲಿ ಬೀಡು ಬಿಟ್ಟಿದೆ.