ಹಾಸನ : ತಂದೆಯನ್ನೇ ಕೊಲೆ ಮಾಡಿ ಮಗ ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ಪಟ್ಟಣದ ಗೂರನಹಳ್ಳಿ ಬಡಾವಣೆಯಲ್ಲಿ ನಡೆದಿದೆ.ಚನ್ನೇಗೌಡ (73) ಕೊಲೆಯಾದ ವ್ಯಕ್ತಿಯಾಗಿದ್ದು ಬಿಂದುಕುಮಾರ್ (42) ಅಪ್ಪನನ್ನೇ ಕೊಂದ ದುರುಳನಾಗಿರುತ್ತಾನೆ.
ನಿವೃತ್ತ ಮುಖ್ಯೋಪಾಧ್ಯಾಯರಾಗಿದ್ದ ಬಿ.ಎನ್.ಚನ್ನೇಗೌಡ ಪತ್ನಿ ನಿಧನದ ಬಳಿಕ ಒಂಟಿಯಾಗಿ ವಾಸವಿದ್ದರು. ಹಾಗೆ ಮಗ ಬೆಂಗಳೂರಿನಲ್ಲಿ ಬಿಂದುಕುಮಾರ್ ಕಾರು ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದು ಕುಟುಂಬ ಸಮೇತ ಅಲ್ಲಿಯೇ ವಾಸವಾಗಿದ್ದನು.
ಮನೆ ಮಾರಾಟ ವಿಚಾರವಾಗಿ ತಂದೆ-ಮಗನ ನಡುವೆ ಜಗಳವಾಗಿರುವ ಶಂಕೆ ವ್ಯಕ್ತವಾಗಿದ್ದು ಶುಕ್ರವಾರ ರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ತಂದೆಯನ್ನು ಕೊಲೆ ಮಾಡಿರುವ ಪಾಪಿ ಪುತ್ರ ನಂತರ ಅದೇ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಬಿಂದುಕುಮಾರ್ ಶನಿವಾರ ಸಂಜೆ ಕಿರಿಯ ಮಗ ಮನೆಗೆ ಬಂದಾಗ ಪ್ರಕರಣ ಬಯಲಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಶುಭನ್ವಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
