Saturday, July 25, 2026
Homeಜಿಲ್ಲಾಸುದ್ದಿಸೋನಮ್ ವಾಂಗ್‌ಚುಕ್ ಬಂಧನ, ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಅತ್ಯಂತ ಖಂಡನೀಯ: ಸಂದೀಪ್ ಜೆವಿ ಜಲದುರ್ಗ

ಸೋನಮ್ ವಾಂಗ್‌ಚುಕ್ ಬಂಧನ, ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಅತ್ಯಂತ ಖಂಡನೀಯ: ಸಂದೀಪ್ ಜೆವಿ ಜಲದುರ್ಗ

Telegram Group
Join Now

ಕೊಪ್ಪ: ನವದೆಹಲಿ ಜಂತರ್ ಮಂತರ್‌ನಲ್ಲಿ ಪರಿಸರ ಹೋರಾಟಗಾರ ಹಾಗೂ ಲಡಾಖ್‌ನ ಜನಪ್ರಿಯ ಸಾಮಾಜಿಕ ಕಾರ್ಯಕರ್ತ ಸೋನಂ ವಾಂಗ್ಚೂಕ್ ಅವರನ್ನು ಬಂಧಿಸಿರುವುದು ಹಾಗೂ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಮತ್ತು ನಾಗರಿಕರ ಮೇಲೆ ಲಾಠಿ ಚಾರ್ಜ್ ನಡೆಸಿರುವ ಘಟನೆ ಅತ್ಯಂತ ಖಂಡನೀಯವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಸಂದೀಪ್ ಜೆವಿ ಜಲದುರ್ಗ ತಿಳಿಸಿದ್ದಾರೆ.

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಇಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನವು ಶಾಂತಿಯುತವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುವ ಹಾಗೂ ಪ್ರತಿಭಟನೆ ನಡೆಸುವ ಹಕ್ಕನ್ನು ನೀಡಿದೆ. ಅಂತಹ ಸಂದರ್ಭದಲ್ಲಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕಾದ ಆಡಳಿತವೇ ಪ್ರತಿಭಟನಾಕಾರರ ಧ್ವನಿಯನ್ನು ಬಲಪ್ರಯೋಗದ ಮೂಲಕ ಹತ್ತಿಕ್ಕಲು ಮುಂದಾಗಿರುವುದು ಕೇಂದ್ರ ಸರ್ಕಾರದ ಕಳವಳಕಾರಿ ಬೆಳವಣಿಗೆಯಾಗಿದೆ.

ವಿದ್ಯಾರ್ಥಿಗಳು ದೇಶದ ಭವಿಷ್ಯ ಅವರು ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರೆ, ಅವರೊಂದಿಗೆ ಸಂವಾದ ನಡೆಸುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದ್ದು, ಲಾಠಿ ಚಾರ್ಜ್‌ನಂತಹ ಕ್ರಮಗಳು ಯಾವುದೇ ರೀತಿಯಲ್ಲೂ ಸಮರ್ಥನೀಯವಲ್ಲ.

ಕೇಂದ್ರಸರ್ಕಾರವು ಭಿನ್ನಾಭಿಪ್ರಾಯಗಳನ್ನು ಪ್ರಜಾಪ್ರಭುತ್ವದ ಮನೋಭಾವದಿಂದ ಸ್ವೀಕರಿಸಿ, ಪ್ರತಿಭಟನಾಕಾರರೊಂದಿಗೆ ಸಂವಾದ ನಡೆಸಿ ಸಮಸ್ಯೆಗಳಿಗೆ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕು. ಬಂಧನಕ್ಕೊಳಗಾದವರ ಹಕ್ಕುಗಳನ್ನು ಗೌರವಿಸಿ, ಕಾನೂನು ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಅನುಸರಿಸಬೇಕು. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯವು ದೇಶದ ವಿರುದ್ಧವಲ್ಲ ಅದು ಉತ್ತಮ ಆಡಳಿತಕ್ಕೆ ದಾರಿದೀಪ ಎಂದರು.

ಆದ್ದರಿಂದ ಈ ಘಟನೆಯ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿ, ನಾಗರಿಕರ ಮೂಲಭೂತ ಹಕ್ಕುಗಳನ್ನು ಗೌರವಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾನು ಒಬ್ಬ ಪ್ರಜ್ಞಾವಂತ ಭಾರತೀಯ ನಾಗರಿಕನಾಗಿ ಆಗ್ರಹ ಪಡಿಸಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments