Tuesday, August 11, 2026
Homeಜಿಲ್ಲಾಸುದ್ದಿರಾಜ್ಯ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಕಿಡಿ: ನಾಡಕಚೇರಿ ಬಾಗಿಲಲ್ಲಿ ಕೂತು ಸಿ.ಟಿ.ರವಿ ಪ್ರತಿಭಟನೆ

ರಾಜ್ಯ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಕಿಡಿ: ನಾಡಕಚೇರಿ ಬಾಗಿಲಲ್ಲಿ ಕೂತು ಸಿ.ಟಿ.ರವಿ ಪ್ರತಿಭಟನೆ

Telegram Group
Join Now

ಚಿಕ್ಕಮಗಳೂರು : ವೃದ್ಧಾಪ್ಯ ವೇತನ, ವಿಧವಾ ವೇತನ ಮತ್ತು ವಿಕಲಚೇತನರ ವೇತನಗಳನ್ನು ಸ್ಥಗಿತಗೊಳಿಸಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳು ಮತ್ತು ರಾಜಕೀಯ ಆಕ್ರೋಶಗಳು ವ್ಯಕ್ತವಾಗುತ್ತಿವೆ. ರಾಜ್ಯ ಸರ್ಕಾರದ ಈ ಧೋರಣೆಯನ್ನು ಖಂಡಿಸಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ನಾಡಕಚೇರಿ ಬಾಗಿಲಲ್ಲೇ ಸಿ.ಟಿ.ರವಿ ಕೂತು ಕಾರ್ಯಕರ್ತರ ಜೊತೆ ಪ್ರತಿಭಟನೆ

ಹೌದು .. ರಾಜ್ಯ ಸರ್ಕಾರದ ಈ ಧೋರಣೆಯನ್ನು ಖಂಡಿಸಿ ವಿರೋಧ ಪಕ್ಷವಾದ ಬಿಜೆಪಿ ಹಾಗೂ ವಿವಿಧ ಸಾಮಾಜಿಕ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಗ್ಯಾರಂಟಿ ಯೋಜನೆಗಳಿಗಾಗಿ ಹಣ ಹೊಂದಿಸಲು ಬಡವರ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಕಡಿತಗೊಳಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು  ವೃದ್ಧಾಪ್ಯ ವೇತನ, ವಿಧವಾ ವೇತನ, ಬಿಪಿಎಲ್ ಕಾರ್ಡ್, ವಿಕಲಚೇತನರ ವೇತನ ರದ್ದು ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಸಿ.ಟಿ.ರವಿಗೆ ನೂರಾರು ಬಿಜೆಪಿ ಕಾರ್ಯಕರ್ತರು ಹಾಗೂ ಜನಸಾಮಾನ್ಯರು ಸಾಥ್ ನೀಡಿದ್ದು  ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಕೂಡ ಭಾಗಿಯಾಗಿದ್ದಾರೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments