Saturday, March 28, 2026
Homeಜಿಲ್ಲಾಸುದ್ದಿಮೈಸೂರು ದಸರಾ ಹಬ್ಬದ ಪ್ರಯುಕ್ತ ಹಾಸನದಿಂದ ವಿಶೇಷ ರೈಲು

ಮೈಸೂರು ದಸರಾ ಹಬ್ಬದ ಪ್ರಯುಕ್ತ ಹಾಸನದಿಂದ ವಿಶೇಷ ರೈಲು

ಹಾಸನ: ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ನೈರುತ್ಯ ರೈಲ್ವೆಯು ಯಶವಂತಪುರ-ಮಡಗಾಂವ್‌ ನಡುವೆ ಒಂದು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಿದೆ.

ಸೆ.30ರಂದು ಮಧ್ಯಾಹ್ನ 12ಕ್ಕೆ ಯಶವಂತಪುರದಿಂದ ಹೊರಡುವ ವಿಶೇಷ ರೈಲು ಮರುದಿನ ಬೆಳಿಗ್ಗೆ 5.30ಕ್ಕೆ ಮಡಗಾಂವ್ ತಲುಪಲಿದೆ.

ಅ.1ರಂದು ಬೆಳಿಗ್ಗೆ 6.30ಕ್ಕೆ ಮಡಗಾಂವ್‌ನಿಂದ ಹೊರಟು, ಅದೇ ದಿನ ರಾತ್ರಿ 11.40ಕ್ಕೆ ಯಶವಂತಪುರ ತಲುಪಲಿದೆ.

16 ಬೋಗಿಗಳ ಈ ರೈಲು ಮಾರ್ಗಗಳಲ್ಲಿ ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!