ಶೃಂಗೇರಿ: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಪ್ರಮಾಣ ಮುಂದುವರಿದಿದೆ. 22 ವರ್ಷದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನ ದಿಶಾ (22) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ದಿಶಾ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿನ ಜೆಸಿಬಿಎಂ ಕಾಲೇಜಿನಲ್ಲಿ ಬಿಕಾಂ (ಅಂತಿಮ ವರ್ಷ) ವ್ಯಾಸಂಗ ಮಾಡುತ್ತಿದ್ದಳು.
ಇಂದು ಬೆಳಗ್ಗೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಡಿಕೊಂಡು, ಕುಸಿದು ಬಿದ್ದಿದ್ದಾಳೆ ಬಿದ್ದು ದಿಶಾಳನ್ನು ಆಸ್ಪತ್ರೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
ಇತ್ತೀಚಿನ ದಿನಗಳಲ್ಲಿ ಬಾಳಿ ಬದುಕಬೇಕಾದ ಎಳೆ ಹೃದಯಗಳು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ತುಂಬಾ ಆತಂಕಕ್ಕೆ ಕಾರಣವಾಗಿದೆ.
