Monday, September 7, 2026
Homeಕ್ರೈಮ್Sringeri: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಹೊಳೆಯಲ್ಲಿ ಮುಳುಗಿ ಪ್ರಾಣಬಿಟ್ಟ ಯುವಕ!

Sringeri: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಹೊಳೆಯಲ್ಲಿ ಮುಳುಗಿ ಪ್ರಾಣಬಿಟ್ಟ ಯುವಕ!

Telegram Group
Join Now

ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕಿನ ಹಾಲಂದೂರು ಗ್ರಾಮದ ಬೆಣ್ಣೆ ಗುಡ್ಡೆ ಎಂಬಲ್ಲಿ ಯುವಕನೊಬ್ಬ ತುಂಗಾ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ. ಗ್ರಾಮದ ಪ್ರತೀಕ್ ಬೆಣ್ಣೆಗುಡ್ಡೆ ಎಂಬ ಯುವಕ ಮೃತ ದುರ್ದೈವಿ.

ಶುಕ್ರವಾರ ಸಂಜೆ ಸುಮಾರಿಗೆ ಘಟನೆ ನಡೆದಿದ್ದು ಸ್ಥಳೀಯರು,ಅಗ್ನಿಶಾಮಕದಳದ ಸಿಬ್ಬಂದಿಗಳಿಂದ ಕತ್ತಲಾಗುವ ವರೆಗೂ ಯುವಕನಿಗಾಗಿ ತೀವ್ರ ಹುಡುಕಾಟ ನಡೆದಿತ್ತು ಆದರೆ ಯುವಕನ ಸುಳಿವು ಸಿಗದೆ ಹಿನ್ನೆಲೆ ಹಾಗೂ ಕತ್ತಲಾದ ಕಾರಣ ಕಾರ್ಯಾಚರಣೆ ಸ್ಥಗಿತಗೊಳಿಸಿ ಶನಿವಾರ ಬೆಳಿಗ್ಗೆಯಿಂದ ಮುಳುಗು ತಜ್ಞ ಈಶ್ವರ್ ಮಲ್ಪೆ ಕಾರ್ಯಾಚರಣೆ ನಡೆಸಿ ನೀರಿನ ಅಡಿಯಲ್ಲಿ ಸಿಲುಕಿದ್ದ ಮೃತದೇಹವನ್ನು ಹೊರ ತೆಗೆದಿದ್ದಾರೆ.

ಈ ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!