ಶೃಂಗೇರಿ: ಆಲ್ಟೋ ಕಾರು ಹಾಗೂ ಟಿಪ್ಪರ್ ನಡುವೆ ಅಪಘಾತ ಆಗಿರುವ ಘಟನೆ ಶೃಂಗೇರಿ ತಾಲೂಕಿನ ಶಿಡ್ಲೆಯಲ್ಲಿ ನಡೆದಿದೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

ಹೌದು .. ನಿಲ್ಲಿಸಿದ್ದ ಟಿಪ್ಪರ್ ಗೆ ಆಲ್ಟೋ ಕಾರು ಗುದ್ದಿದ್ದು ಚಾಲಕನ ಅಜಾಗರುಕತೆಯೇ ಅಪಘಾತಕ್ಕೆ ಕಾರಣವೆಂದು ತಿಳಿದು ಬಂದಿದೆ.

ಕಾರಿನಲ್ಲಿದ್ದವರು ನಾಲ್ಕು ಜನ ನೆಮ್ಮಾರ್ ಮೂಲದವರೆಂದು ತಿಳಿದು ಬಂದಿದ್ದು ಇಬ್ಬರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದು ಸ್ಥಳೀಯರು ರಕ್ಷಣೆ ಮಾಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
