Thursday, July 30, 2026
Homeಜಿಲ್ಲಾಸುದ್ದಿಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಕೇಸ್: ಆಗಸ್ಟ್‌ 19ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಕೇಸ್: ಆಗಸ್ಟ್‌ 19ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್

Telegram Group
Join Now

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಥಾಸ್ಥಿತಿ ಮುಂದುವರಿಸಲು ಸೂಚನೆ ನೀಡಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್‌ 19ಕ್ಕೆ ಮುಂದೂಡಿಕೆ ಮಾಡಿದೆ.

2023ರ ಸಾರ್ವತ್ರಿಕ ಚುನಾವಣಾ ಫಲಿತಾಂಶದಲ್ಲಿ ಶೃಂಗೇರಿಯ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ.ರಾಜೇಗೌಡ 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಪ್ರತಿಸ್ಪರ್ಧಿ ಬಿಜೆಪಿಯ ಡಿ.ಎನ್.ಜೀವರಾಜ್ ಅಂಚೆ ಮತಗಳ ಮರು ಎಣಿಕೆಗೆ ಪಟ್ಟು ಹಿಡಿದು, ಕೋರ್ಟ್ ಮೊರೆ ಹೋಗಿದ್ದರು. 3 ವರ್ಷಗಳ ಕಾಲ ವಿಚಾರಣೆ ನಡೆದು ಅಂತಿಮವಾಗಿ ಹೈಕೋರ್ಟ್ ಅಂಚೆ ಮತಗಳ ಮರು ಮತಗಳ ಮರು ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸುವಂತೆ ಆದೇಶಿಸಿತ್ತು.

ಮೇ 2ರಂದು ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯ ಡಿ.ಎನ್.ಜೀವರಾಜ್ 52 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. 3 ವರ್ಷ ಶಾಸಕರಾಗಿದ್ದ ಕಾಂಗ್ರೆಸ್ಸಿನ ರಾಜೇಗೌಡ 255 ಮತಗಳಿಂದ ಸೋತಿದ್ದರು. ಡಿ‌.ಎನ್.ಜೀವರಾಜ್ ಪ್ರಮಾಣ ವಚನ ಕೂಡ ಸ್ವೀಕರಿಸಿದ್ದರು. ಆದರೆ, ಹೈ ಕೋರ್ಟ್ ಆದೇಶದಂತೆ ನಡೆದ ಅಂಚೆ ಮತ ಮರು ಎಣಿಕೆ ಫಲಿತಾಂಶದ ಬಗ್ಗೆ ಪರಾಜಿತ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಕದ ಬಡಿದಿದ್ದರು. ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ಬ್ರೇಕ್ ಹಾಕಿ ಟಿ.ಡಿ.ರಾಜೇಗೌಡ ಶಾಸಕ ಸ್ಥಾನ ಮುಂದುವರಿಸುವಂತೆ ಆದೇಶಿಸಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments