ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಜನರ ಬಹುದಿನಗಳ ಬೇಡಿಕೆಯಾಗಿದ್ದ ನೂತನ 100 ಹಾಸಿಗೆಗಳ ಆಸ್ಪತ್ರೆಯ ಕಟ್ಟಡದ ಶಂಕುಸ್ಥಾಪನೆಯನ್ನುಇಂದು ನೆರವೇರಿದೆ.

ಹೌದು .. ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸಿದರು. ಈ ವೇಳೆ ಶೃಂಗೇರಿ ಶಾಸಕರಾದ ಟಿ.ಟಿ ರಾಜೇಗೌಡರು ಸಹ ಉಪಸ್ಥಿತರಿದ್ದರು.
ಸುಮಾರು ರೂ. 37 ಕೋಟಿ 60 ಲಕ್ಷಗಳಲ್ಲಿ ನಿರ್ಮಾಣಗೊಳ್ಳಲಿರುವ ಈ ಸಮುದಾಯ ಆರೋಗ್ಯ ಕೇಂದ್ರ ಸುತ್ತಮುತ್ತಲಿನ ಹಲವು ಗ್ರಾಮಗಳ ಜನತೆಗೆ ಆರೋಗ್ಯ ಸೇವೆಗಳನ್ನು ಒದಗಿಸಲಿದೆ

ಜಿಲ್ಲಾ ಆರೋಗ್ಯಧಿಕಾರಿಗಳು, ಜಿಲ್ಲಾಧಿಕಾರಿಗಳು, ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

ಆ ನಂತರ ಶೃಂಗೇರಿ ದೇವಸ್ಥಾನಕ್ಕೆ ತೆರಳಿ ಶಾರದಾಂಬೆಯ ದರ್ಶನ ಪಡೆದ ಸಚಿವರು ವಿಶೇಷ ಪೂಜೆ ಕೂಡ ಸಲ್ಲಿಸಿದರು. ಬಳಿಕ ಶಾರಾದ ಪೀಠದ ಹಿರಿಯ ಜಗದ್ಗುರುಗಳಾದ ಭಾರತಿ ತೀರ್ಥ ಸ್ವಾಮಿಗಳ ಆಶೀರ್ವಾದ ಪಡೆದರು ಹಾಗೆ ಕಲೆ ಹೊತ್ತು ಮಾತುಕತೆ ಕೂಡ ಆಡಿದರು.
