ಶೃಂಗೇರಿ ಶಾಸಕರಾದ ಟಿ.ಡಿ. ರಾಜೇಗೌಡ ಅವರು ಇಂದು ಕೇಂದ್ರ ರೈಲ್ವೇ ಸಚಿವರಾದ ವಿ. ಸೋಮಣ್ಣ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದರು.
ಹೌದು .. ಶಿವಮೊಗ್ಗ ಭದ್ರಾವತಿ ನರಸಿಂಹರಾಜಪುರ ಕೊಪ್ಪ ಶೃಂಗೇರಿ ಮಾರ್ಗವಾಗಿ ಮಂಗಳೂರಿಗೆ ರೈಲ್ವೆ ಸಂಪರ್ಕ ಕಲ್ಪಿಸಿ ಕೊಡುವಂತೆ ಶೃಂಗೇರಿ ಶಾಸಕರಾದ ಟಿ.ಡಿ. ರಾಜೇಗೌಡರು ಅವರು ಕೇಂದ್ರ ರೈಲ್ವೆ ಸಚಿವರಾದ ಸೋಮಣ್ಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
————————————————-
ಚಿಕ್ಕಮಗಳೂರು: ರಾಜ್ಯ ಸರ್ಕಾರದ ಜನಪ್ರಿಯ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಭದ್ರಾ ಕಾಡಾ ಪ್ರಾಧಿಕಾರದ ಸವಲತ್ತುಗಳನ್ನು ಮನೆ ಮನಗಳಿಗೆ ಮುಟ್ಟಿಸುವ ಜವಾಬ್ದಾರಿ ಸದಸ್ಯರ ಮೇಲಿದೆ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಪಿ.ಅಂಶುಮಂತ್ ತಿಳಿಸಿದರು.
ಶಿವಮೊಗ್ಗ ಜಿಲ್ಲೆಯ ಭದ್ರಾ ಕಾಡಾ ಪ್ರಾಧಿಕಾರದ ಸಭಾಂಗಣದಲ್ಲಿ ಸೋಮವಾರ ನಡೆದ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಪಂಚ ಗ್ಯಾರಂಟಿ ಪ್ರಾಧಿಕಾರದ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಭದ್ರಾ ಕಾಡಾ ಪ್ರಾಧಿಕಾರದಿಂದ ರೈತರಿಗೆ ಅನೇಕ ಮಾರ್ಗಸೂಚಿಗಳನ್ನು ನೀಡಲಾಗಿದೆ. ಹೆಚ್ಚು ನೀರು ಬಳಕೆಯಿಂದ ಭೂಮಿ ಹದಗೆಡುವ ಸಾಧ್ಯತೆಯಿದ್ದು, ಆದ್ದರಿಂದ ನಿಯಮಿತ ನೀರು ಬಳಸಿಕೊಂಡು ಭೂಮಿ ಫಲವವತ್ತೆ ಕಾಪಾಡಿಕೊಳ್ಳಬೇಕು ಎಂದರು.
ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಿಸಿದ್ದು, ಮುಂದಿನ ದಿನಗಳಲ್ಲಿ ಹೊಸದಾಗಿ ಆಹಾರದ ಕಿಟ್‌ಗಳನ್ನು ವಿತರಿಸುವ ಗುರಿ ಹೊಂದಿದೆ ಎಂದು ತಿಳಿಸಿದರು.
ದೇಶದ ಬೆನ್ನಲುಬಾಗಿರುವ ರೈತರಿಗೆ ನೀರಿನ ಸಮರ್ಪಕ ಬಳಕೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಪ್ರಾಧಿಕಾರ ನಿರಂತರವಾಗಿ ಮಾಡುತ್ತಿದೆ ಎಂದರು.
ಚಿಕ್ಕಮಗಳೂರು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ‘ಪಂಚ ನದಿಗಳ ಉಗಮ ಸ್ಥಾನವಾದ ಜಿಲ್ಲೆಗೆ ವಿಶೇಷ ಗೌರವವಿದೆ. ಅಲ್ಲದೇ ಜಿಲ್ಲೆಯಿಂದ ಹರಿಯುವ ನೀರು ಶಿವಮೊಗ್ಗದತ್ತ ಸಾಗಿ ಲಕ್ಷಾಂತರ ಜನರಿಗೆ ಕುಡಿಯಲು ಬಳಕೆ ಆಗುತ್ತಿದೆ’ ಎಂದರು
