Thursday, March 26, 2026
Homeಜಿಲ್ಲಾಸುದ್ದಿಶೃಂಗೇರಿ: ಕಾಡಾನೆ ದಾಳಿಯಿಂದ ಮೃತಪಟ್ಟ ಮನೆಗೆ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ!

ಶೃಂಗೇರಿ: ಕಾಡಾನೆ ದಾಳಿಯಿಂದ ಮೃತಪಟ್ಟ ಮನೆಗೆ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ!

ಚಿಕ್ಕಮಗಳೂರು : ಜಿಲ್ಲೆಯ ಶೃಂಗೇರಿ ತಾಲೂಕಿನ ಕೆರೆಮನೆ ಗ್ರಾಮದಲ್ಲಿ ಕಳೆದ ಶುಕ್ರವಾರ ನಡೆದ ಕಾಡಾನೆ ದಾಳಿ ದುರಂತದಲ್ಲಿ ಮೃತಪಟ್ಟ ಹರೀಶ್‌ ಮತ್ತು ಉಮೇಶ್‌ ಅವರ ಕುಟುಂಬಗಳಿಗೆ ಸೋಮವಾರ ಸಂಸದ ಕೋಟ ಶ್ರೀನಿವಾಸ ಪೂಜಾರಿಯವ್ರು ಭೇಟಿ ನೀಡಿ ಸಾಂತ್ವನ ಹೇಳಿದರು.

ಹೌದು .. ದುರಂತಕ್ಕೀಡಾದ ಹರೀಶ್‌ ಮತ್ತು ಉಮೇಶ್‌ ಅವರ ನಿವಾಸಗಳಿಗೆ ತೆರಳಿ ಕುಟುಂಬ ಸದಸ್ಯರ ದುಃಖದಲ್ಲಿ ಸಂಸದರು ಭಾಗಿಯಾದರು. ಎರಡು ಕುಟುಂಬಗಳಿಗೆ ಧೈರ್ಯ ತುಂಬಿ ಸಾಂತ್ವನದ ಮಾತುಗಳನ್ನಾಡಿದರು.

ಇತ್ತೀಚಿನ ದಿನಗಳಲ್ಲಿ ಆನೆ ತುಳಿತದಿಂದ ಈ ಭಾಗದಲ್ಲಿ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವರಿಗೆ ಈಗಾಗಲೇ ಮನವಿ ಸಲ್ಲಿಸಲಾಗಿದ್ದು, ಈ ಭಾಗದಲ್ಲಿ ಆನೆಗಳ ದೊಡ್ಡಿ ಸ್ಥಾಪಿಸಲು ಅವಕಾಶ ಕಲ್ಪಿಸುವಂತೆ ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಗ್ರಾಮಸ್ಥರಿಗೆ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!