Tuesday, February 10, 2026
Homeಜಿಲ್ಲಾಸುದ್ದಿಶೃಂಗೇರಿ: ಕಾಡಾನೆ ಸ್ಥಳಾಂತರಕ್ಕೆ ಆಗ್ರಹಿಸಿ ಅರಣ್ಯ ಇಲಾಖೆ ಮುಂಭಾಗ ಪ್ರತಿಭಟನೆ!

ಶೃಂಗೇರಿ: ಕಾಡಾನೆ ಸ್ಥಳಾಂತರಕ್ಕೆ ಆಗ್ರಹಿಸಿ ಅರಣ್ಯ ಇಲಾಖೆ ಮುಂಭಾಗ ಪ್ರತಿಭಟನೆ!

ಶೃಂಗೇರಿ: ಕಾಡಾನೆಯನ್ನು ಸ್ಥಳಾಂತರಿಸಬೇಕೆಂದು ಆಗ್ರಹಿಸಿ ಮಲೆನಾಡು ನಾಗರೀಕ ಹಕ್ಕುಗಳ ಹೋರಾಟ ಸಮಿತಿಯಿಂದ ಅರಣ್ಯ ಇಲಾಖೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಹೌದು .. ಮಲೆನಾಡು ನಾಗರೀಕ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಅಂಬ್ಲೂರು ರಾಮಕೃಷ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.

ಈ ವೇಳೆ ತಾಲೂಕು ಅಧ್ಯಕ್ಷರಾದ ಅಮ್ಲೂರ್ ರಾಮಕೃಷ್ಣ ಮಾತನಾಡಿ, ಕಾಡಾನೆಗಳನ್ನು ಸೆರೆಹಿಡಿದು ಸ್ಥಳಾಂತರಿಸಬೇಕೆಂದು ಒತ್ತಾಯಿಸಿದರು ರೈತರಿಗೆ ಕೂಲಿ ಕಾರ್ಮಿಕರಿಗೆ ಹಾಗೂ ಶಾಲೆ ಮಕ್ಕಳಿಗೆ ಶಾಲೆಗಳಿಗೂ ತೆರಳಲು ಕೂಡ ಭಯದ ವಾತಾವರಣ ಸೃಷ್ಟಿಯಾಗಿದೆ ಕೂಡಲೇ ಸರ್ಕಾರ ಅರಣ್ಯ ಇಲಾಖೆ ತಕ್ಷಣ ಆನೆಗಳನ್ನು ಸೆರೆಹಿಡಿದು ಸ್ಥಳಾಂತರಿಸಬೇಕೆಂದು ಆಗ್ರಹಿಸಿದರು.

ಹಾಗೆ ಸ್ಥಳಕ್ಕೆ ಆಗಮಿಸಿದ ಡಿಎಫ್ಓ ಶಶಿಧರ್ ಪ್ರತಿಭಟನಾಕಾರರೊಂದಿಗೆ ಮಾತನಾಡಿ, ಆನೆಯ ಚಲನವಲನಗಳ ಬಗ್ಗೆ ಅರಣ್ಯ ಇಲಾಖೆ ತೀವ್ರ ಕಟ್ಟೆಚ್ಚರದಿಂದ ಇದ್ದು ಮುಂದಿನ ಎರಡು ಮೂರು ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಆನೆಯ ಸ್ಥಳಾಂತರಕ್ಕೆ ಕಾರ್ಯತಂತ್ರ ಹಣೆಯಲಾಗುತ್ತದೆ ತಿಳಿಸಿದರು

ಪ್ರತಿಭಟನೆಯಲ್ಲಿ ಮುಖಂಡರಾದ ಅಂಗುರುಡಿ ದಿನೇಶ್, ನೂತನ್ ಕುಮಾರ್, ಸುರೇಶ್ ಜಟಗೇಶ್ವರ, ಕಚೋಡಿ ಶ್ರೀನಿವಾಸ್, ನಾಗೇಶ್ ನಾಯಕ್ ಇತರ ಮುಖಂಡರು ಭಾಗವಹಿಸಿದ್ದರು.

ವರದಿ: ವಿಠಲ್‌ ಶೃಂಗೇರಿ

ದೂರವಾಣಿ ಸಂಖ್ಯೆ: 7676798969

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!