Tuesday, February 10, 2026
Homeಜಿಲ್ಲಾಸುದ್ದಿಶೃಂಗೇರಿ: ನಾಳೆ ಮತಗಳ್ಳತನದ ವಿರುದ್ಧ ಸಹಿ ಸಂಗ್ರಹ, ಜನಜಾಗೃತಿ ಅಭಿಯಾನ: ದುರ್ಗಾ ಚರಣ್ ಕುಂಚೂರು

ಶೃಂಗೇರಿ: ನಾಳೆ ಮತಗಳ್ಳತನದ ವಿರುದ್ಧ ಸಹಿ ಸಂಗ್ರಹ, ಜನಜಾಗೃತಿ ಅಭಿಯಾನ: ದುರ್ಗಾ ಚರಣ್ ಕುಂಚೂರು

ಕೊಪ್ಪ: ದೇಶದಾದ್ಯಂತ ಸಂಚಲನ ಮೂಡಿಸಿರುವ ಮತಗಳ್ಳತನದ ವಿರುದ್ದ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ನಡೆಸುತ್ತಿರುವ ಹೋರಾಟ ಮತ್ತು ಜನಜಾಗೃತಿ ಅಭಿಯಾನದ ಭಾಗವಾಗಿ ಶೃಂಗೇರಿ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಕೊಪ್ಪ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಪ್ರತಿಭಟನೆ ಕೈಗೊಳ್ಳಲಿದೆ.

ನಾಳೆ ಮಂಗಳವಾರ ಮಧ್ಯಾಹ್ನ 3:00 ಘಂಟೆಗೆ ಸರಿಯಾಗಿ ಕೊಪ್ಪ ಪಟ್ಟಣದ ಬಸ್ ನಿಲ್ದಾಣದಲ್ಲಿ ಬೃಹತ್ ಸಹಿ ಸಂಗ್ರಹ ಅಭಿಯಾನ ಮತ್ತು ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಶೃಂಗೇರಿ ಕ್ಷೇತ್ರದ ಗೌರವಾನ್ವಿತ ಶಾಸಕರಾದ ಟಿ.ಡಿ.ರಾಜೇಗೌಡರು, ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯ ಮುಖ್ಯ ಸಂಯೋಜಕರಾದ ಸುಧೀರ್ ಕುಮಾರ್ ಮುರೊಳ್ಳಿಯವರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಡಾ!ಕೆ.ಪಿ.ಅಂಶುಮಂತ್, ಯುವ ಕಾಂಗ್ರೆಸ್ ಉಸ್ತುವಾರಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಜಿತ್ ವಡ್ಡರ್ಸೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಜಿತ್ ದಂಡಿನಮಕ್ಕಿ, ಕೊಪ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕುಕ್ಕುಡಿಗೆ ರವೀಂದ್ರ, ಯುವ ಕಾಂಗ್ರೆಸ್ ಮತ್ತು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಮುಂಚೂಣಿ ಘಟಕಗಳ ಅಧ್ಯಕ್ಷರು ಸದಸ್ಯರುಗಳು ನಾಮ ನಿರ್ದೇಶಿತ ಸದಸ್ಯರುಗಳು ಪ್ರೀತಿಯ ಕಾಂಗ್ರೆಸ್ ಕುಟುಂಬದ ಹೆಮ್ಮೆಯ ಕಾರ್ಯಕರ್ತರುಗಳು ಭಾಗವಹಿಸಲಿದ್ದಾರೆ ಎಂದು ಶೃಂಗೇರಿ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷರಾದ ದುರ್ಗಾಚರಣ್ ಕುಂಚೂರ್ ಪಬ್ಲಿಕ್ ಇಂಪ್ಯಾಕ್ಟ್ ಗೆ ತಿಳಿಸಿದ್ದಾರೆ.


ಈ ಸಂಧರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ತಯೀಬ್, ಕೊಪ್ಪ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ವಿಜಯಾನಂದ, ಗ್ಯಾರಂಟಿ ಸಮಿತಿ ಸದಸ್ಯರಾದ ರಾಘವೇಂದ್ರ ತಲಮಕ್ಕಿ ಉಪಸ್ಥಿತರಿದ್ದರು.

ವರದಿ: ಶಶಿ ಬೆತ್ತದಕೊಳಲು

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!