Monday, August 4, 2025
!-- afp header code starts here -->
Homeಜಿಲ್ಲಾಸುದ್ದಿಬಡವಾಯ್ತು ಬಡಗುತಿಟ್ಟಿನ ಯಕ್ಷಗಾನ ರಂಗ; ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ

ಬಡವಾಯ್ತು ಬಡಗುತಿಟ್ಟಿನ ಯಕ್ಷಗಾನ ರಂಗ; ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ

ಬೆಂಗಳೂರು; ಯಕ್ಷಗಾನ ರಂಗ ಕಂಡ ಪ್ರಯೋಗಶೀಲ ಭಾಗವತ,  ಬಡಗುತಿಟ್ಟಿನ ಯಕ್ಷಗಾನದಲ್ಲಿ ಹೊಸ ಅಲೆ ಮೂಡಿಸಿದ  ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ (67) ಇಂದು ವಿಧಿವಶರಾಗಿದ್ದಾರೆ. ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ ಇಂದು ಬೆಳಗ್ಗೆ 4.30 ಕ್ಕೆ ಬೆಂಗಳೂರಿನಲ್ಲಿ ಪುತ್ರನ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಪೆರ್ಡೂರು ಮೇಳವೊಂದರಲ್ಲೇ 28 ವರ್ಷ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಇನ್ನು ಅವರು ಅದಕ್ಕೂ ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ ಪೆರ್ಡೂರು ಮೇಳದಲ್ಲಿ ಉತ್ತಮ ಹೆಸರು ಪಡೆದರು.

1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ  ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು.ಬಳಿಕ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು.

ಪ್ರಾಚಾರ್ಯ ನಾರಣಪ್ಪ ಉಪ್ಪೂರರ ಮೂಲಕ ರಂಗಸ್ಥಳದ ಮೇಲೇರಿದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು.ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳ ತಿರುಗಾಟ ನಿಲ್ಲಿಸಿದ್ದರು.ಮೇಳ ಬಿಟ್ಟು 10 ವರ್ಷದ ಬಳಿಕ ಮತ್ತೆ ಅದೇ ಮೇಳಕ್ಕೆ ಅನಿವಾರ್ಯ ಸಂದರ್ಭದಲ್ಲಿ ಸೇರಿ ಒಂದು ವರ್ಷದ ತಿರುಗಾಟ ಮಾಡಿದ್ದರು.

ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಬದುಕಿನುದ್ದಕ್ಕೂ ತಮ್ಮ ಅದ್ಭುತ ಸ್ವರದ ಮೂಲಕವೇ ಲಕ್ಷಾಂತರ ಅಭಿಮಾನಿಗಳನ್ನು ಸೆಳೆದಿಟ್ಟುಕೊಂಡಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅಗಲಿಕೆ ಯಕ್ಷಲೋಕಕ್ಕೆ ಎಂದಿಗೂ ಅರಗಿಸಿಕೊಳ್ಳಲಾಗದ ಬಹುದೊಡ್ಡ ನಷ್ಟ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!