ಮಂಡ್ಯ : ಈ ಹಿಂದೆ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನಡುವೆ ಯಾವ ರೀತಿ ವಾಕ್ಸಮರ ನಡೆದಿತ್ತು ಅನ್ನೋದು ನಿಮಗೆಲ್ಲಾ ಗೊತ್ತೇ ಇದೆ. ಆದರೆ ಇಂದು ಮಂಡ್ಯದಲ್ಲಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕರ್ತರ ಸಭೆಯಲ್ಲಿ ಸುಮಲತಾ ನನ್ನ ಸ್ವಂತ ಅಕ್ಕ ಇದ್ದ ಹಾಗೆ ಎಂದು ಅಚ್ಚರಿ ಮೂಡಿಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಈ ಒಂದು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂಸದೆ ಸುಮಲತಾ ನನ್ನ ಸ್ವಂತ ಅಕ್ಕ ಎಂದಿದ್ದಾರೆ.
ಅಭ್ಯರ್ಥಿ ಘೋಷಣೆ ಮಾಡದ ಬಗ್ಗೆ ಕಾರ್ಯಕರ್ತರಲ್ಲ ಗೊಂದಲವಿದೆ. ಮಂಡ್ಯ ಕ್ಷೇತ್ರ ನಿರ್ಲಕ್ಷ ಮಾಡುತ್ತಿದ್ದಾರೆ ಅನ್ನೋ ಪ್ರಶ್ನೆ ಹಲವರಲ್ಲಿ ಇದೆ.ಇಂದಿನ ಸಭೆಯಲ್ಲಿ ನಾವು ಸಂದೇಶ ಕೊಡುವುದಕ್ಕಿಂತ ನೀವೇ ಕೊಟ್ಟಿದ್ದೀರಿ. ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕೆಲವು ಗೊಂದಲ ಇತ್ತು. ಹೀಗಾಗಿ ನಾನೇ ಹಾಸನಕ್ಕೆ ಹೋಗಿ ಅಪಪ್ರಚಾರಕ್ಕೆ ಅಂತ್ಯ ಹಾಡಿದ್ದೇನೆ ಎಂದಿದ್ದಾರೆ.