ಚಿಕ್ಕಮಗಳೂರು: ವೈಯಕ್ತಿಕ ದ್ವೇಷಕ್ಕೆ 150ಕ್ಕೂ ಅಧಿಕ ಅಡಿಕೆ ಗಿಡಗಳನ್ನು ಕಡಿದು ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ನಡೆದಿದೆ.
ಬೆಳೆಗಾರ ಸಣ್ಣಪ್ಪ ಅವರು ಮುಕ್ಕಾಲು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ನಾಲ್ಕು ವರ್ಷದ ಅಡಿಕೆ ಗಿಡಗಳನ್ನು ಕಿಡಿಗೇಡಿಗಳು ರಾತ್ರೋರಾತ್ರಿ ನಾಶಪಡಿಸಿದ್ದಾರೆ. ಮುಂದಿನ ವರ್ಷದಿಂದ ಫಸಲು ನೀಡುವ ನಿರೀಕ್ಷೆಯಲ್ಲಿದ್ದ ಗಿಡಗಳು ನಾಶವಾಗಿದ್ದರಿಂದ ಬೆಳೆಗಾರನಿಗೆ ಆಘಾತವಾಗಿದೆ.
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
