Wednesday, March 25, 2026
Homeಕ್ರೈಮ್ತರೀಕೆರೆ: ಶಾರ್ಟ್ ಸರ್ಕ್ಯೂಟ್‌: ಎಲೆಕ್ಟ್ರಾನಿಕ್ & ಹಾರ್ಡ್‌ವೇರ್ ಅಂಗಡಿ ಬೆಂಕಿಗಾಹುತಿ

ತರೀಕೆರೆ: ಶಾರ್ಟ್ ಸರ್ಕ್ಯೂಟ್‌: ಎಲೆಕ್ಟ್ರಾನಿಕ್ & ಹಾರ್ಡ್‌ವೇರ್ ಅಂಗಡಿ ಬೆಂಕಿಗಾಹುತಿ

ತರೀಕೆರೆ: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ರಾಮ್‌ದೇವ್ ಎಲೆಕ್ಟ್ರಾನಿಕ್ ಹಾಗೂ ಹಾರ್ಡ್‌ವೇರ್ ಅಂಗಡಿ ಬೆಂಕಿಗಾಹುತಿಯಾಗಿದೆ. ಈ ದುರ್ಘಟನೆಯಲ್ಲಿ ಸುಮಾರು 50 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ನಾಶವಾಗಿವೆ ಎಂದು ಅಂದಾಜಿಸಲಾಗಿದೆ.

ಪಟ್ಟಣದ ಬಿ.ಹೆಚ್. ರಸ್ತೆಯಲ್ಲಿರುವ ಈ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಲೇ ಅಂಗಡಿಯಲ್ಲಿದ್ದ ಎಲೆಕ್ಟ್ರಾನಿಕ್ ಮತ್ತು ಹಾರ್ಡ್‌ವೇರ್ ವಸ್ತುಗಳು ಧಗಧಗಿಸಿ ಉರಿಯತೊಡಗಿದವು. ಸ್ಥಳೀಯರು ಬೆಂಕಿಯನ್ನು ಗಮನಿಸಿ ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಲವು ಗಂಟೆಗಳ ಕಾಲ ಶ್ರಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು. ಈ ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರೂ, ಅಂಗಡಿ ಮಾಲೀಕರಿಗೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ.

ಇತ್ತೀಚಿನ ದಿನಗಳಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅಂಗಡಿಗಳು ಹಾಗೂ ಮನೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!