ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 11 ವರ್ಷಗಳ ಕೇಂದ್ರ ಸರ್ಕಾರದ ಸಂಕಲ್ಪ ಸಾಧನೆಗಳ ಸಂವಾದ ಕಾರ್ಯಕ್ರಮವಿದ್ದು ಜುಲೈ 12ರಂದು ನಗರದ ಆದಿಚುಂಚನ ತಾಂತ್ರಿಕ ಮಹಾವಿದ್ಯಾಲಯದ ಸೆಮಿನಾರ್ ಸಭಾಂಗಣದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರು ಮತ್ತು ಬಿಜೆಪಿ ಯುವ ಮೋರ್ಚ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಭಾಗವಹಿಸಿ ಕೇಂದ್ರ ಸರ್ಕಾರದ 11 ವರ್ಷಗಳ ಸಂಕಲ್ಪ ಸಾಧನೆಗಳ ಕುರಿತು ಮಾತನಾಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿರುವ ಯುವಜನರು ಭಾಗವಹಿಸಲಿದ್ದಾರೆ. ವಿಧಾನ ಪರಿಷತ್ ಉಪಸಭಾಪತಿ ಎಂ. ಕೆ. ಪ್ರಾಣೇಶ್, ಮಾಜಿ ಸಚಿವರಾದ ವಿಧಾನ ಪರಿಷತ್ ಶಾಸಕ ಡಾ. ಸಿ. ಟಿ. ರವಿ, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಶಾಸಕ ಎಸ್. ಎಲ್. ಭೋಜೇಗೌಡ. ಮಾಜಿ ಸಚಿವರಾದ ಡಿ. ಎನ್. ಜೀವರಾಜ್, ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್, ಡಿ.ಎಸ್. ಸುರೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್. ದೇವರಾಜ್ ಶೆಟ್ಟಿ ಸೇರಿ ಅನೇಕರು ಭಾಗವಹಿಸಲಿದ್ದಾರೆ.