ಸಕಲೇಶಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಸಕಲೇಶಪುರ ತಾಲೂಕು ಬಿಜೆಪಿ ಮಂಡಲದ ವತಿಯಿಂದ ಇಂದು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಶಾಸಕ ಸಿಮೆಂಟ್ ಮಂಜು ಭಾಗವಹಿಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
“ಬಡವರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸ ಮಾಡಬೇಡಿ, ಜನಸಾಮಾನ್ಯರ ಕಷ್ಟಕ್ಕೆ ಸ್ಪಂದಿಸಿ. ಏರಿಕೆ ಮಾಡಿರುವ ಎಲ್ಲಾ ದರಗಳನ್ನು ಹಿಂಪಡೆದು ಹಳೆಯ ದರವನ್ನು ಜಾರಿಗೊಳಿಸಿ. ಇಲ್ಲದಿದ್ದರೆ ಭಾರತೀಯ ಜನತಾ ಪಾರ್ಟಿ ಉಗ್ರ ಹೋರಾಟ ನಡೆಸಲಿದೆ” ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಅಕ್ಕಿ, ಬೇಳೆ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. 500 ಇಟ್ಟುಕೊಂಡು ಬೆಂಗಳೂರಿಗೆ ಹೋಗಿ ಬರುವುದೂ ಬಡವರಿಗೆ ಕಷ್ಟವಾಗಿದೆ ಹಾಲಿನ ದರ ಏರಿಕೆಯಿಂದ ಬಡ ಕುಟುಂಬಗಳ ಮಕ್ಕಳಿಗೆ ಒಂದು ಲೋಟ ಹಾಲು ಕೊಡಿಸುವುದೂ ದುಸ್ತರವಾಗಿದೆ.ಹಾಲಿನ ದರ ಹಾಗೂ ಹಾಲಿನ ಉತ್ಪನ್ನಗಳ ಬೆಲೆ ಏರಿಕೆಗೆ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.ಸಕಲೇಶಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಸಕಲೇಶಪುರ ತಾಲೂಕು ಬಿಜೆಪಿ ಮಂಡಲದ ವತಿಯಿಂದ ಇಂದು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಶಾಸಕ ಸಿಮೆಂಟ್ ಮಂಜು ಭಾಗವಹಿಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
