Tuesday, April 7, 2026
Homeಕ್ರೈಮ್ಮೂಡಿಗೆರೆ ತಾಲೂಕಿನ ಹಲವು ಕಡೆ ಚುನಾವಣಾ ಶಾಖೆಗಳಲ್ಲಿ ಸಿಬ್ಬಂದಿಗಳ ಕೊರತೆ!

ಮೂಡಿಗೆರೆ ತಾಲೂಕಿನ ಹಲವು ಕಡೆ ಚುನಾವಣಾ ಶಾಖೆಗಳಲ್ಲಿ ಸಿಬ್ಬಂದಿಗಳ ಕೊರತೆ!

ಮೂಡಿಗೆರೆ: ಜಿಲ್ಲೆಯ ಮೂಡಿಗೆರೆ ಸೇರಿದಂತೆ ಹಲವು ತಾಲೂಕು ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚುನಾವಣಾ ಶಾಖೆಗಳು ಸಿಬ್ಬಂದಿಗಳ ಕೊರತೆಯಿಂದಾಗಿ ನಿಷ್ಕ್ರೀಯಗೊಂಡಿವೆ.

ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ದತೆ ಮಾಡಿಕೊಳ್ಳುತ್ತಿದೆ. ಇದಕ್ಕೆ ಪೂರಕವಾಗಿ ಕೆಲಸ ನಿರ್ವಹಿಸಬೇಕಾಗಿರುವ ಚುನಾವಣಾ ಶಾಖೆಗಳು ಸಿಬ್ಬಂದಿಗಳ ಕೊರತೆಯಿಂದಾಗಿ ನಿಷ್ಕ್ರೀಯಗೊಂಡಿವೆ.

ಮೂಡಿಗೆರೆ ತಾಲೂಕು ಚುನಾವಣಾ ಶಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಎದುರಾಗಿದೆ. ಇಲ್ಲಿ 4 ಮಂದಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕಾಗಿತ್ತು. ಹಾಲಿ ಶೀರಸ್ತೇದಾರ್ ಹಾಗೂ ಓರ್ವ ಆಪರೇಟರ್ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದರಿಂದಾಗಿ ಮತದಾರರ ಪಟ್ಟಿ ಪರಿಷ್ಕರಣೆ, ಮ್ಯಾಪಿಂಗ್, ಮತಗಟ್ಟೆ ವಿಂಗಡಣೆ, ಬಿಎಲ್ ಓ ನೇಮಕಕ್ಕೆ ಹಿನ್ನಡೆಯಾಗಿದೆ. ಇದಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಶಾಖೆಗೆ ಪೂರ್ಣ ಪ್ರಮಾಣದಲ್ಲಿ ಸಿಬ್ಬಂದಿಗಳನ್ನು ಜಿಲ್ಲಾಡಳಿತ ನೇಮಕ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!