Wednesday, August 26, 2026
Homeಜಿಲ್ಲಾಸುದ್ದಿಟಿಪ್ಪು ಕಟೌಟ್‌ʼಗೆ ಪಾಕ್‌ ಹಾಡು ವಿವಾದ: NIAಗೆ ವಹಿಸಬೇಕೆಂದು ಹಿಂದೂ ಹಿತರಕ್ಷಣಾ ವೇದಿಕೆ ಆಗ್ರಹ!

ಟಿಪ್ಪು ಕಟೌಟ್‌ʼಗೆ ಪಾಕ್‌ ಹಾಡು ವಿವಾದ: NIAಗೆ ವಹಿಸಬೇಕೆಂದು ಹಿಂದೂ ಹಿತರಕ್ಷಣಾ ವೇದಿಕೆ ಆಗ್ರಹ!

Telegram Group
Join Now

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್-ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಬ್ಯಾನರ್‌ಗೆ ಪಾಕಿಸ್ತಾನಕ್ಕೆ ಸಂಬಂಧಿಸಿದ ಹಾಡು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಹಿಂದೂ ಹಿತರಕ್ಷಣಾ ವೇದಿಕೆ ಆಗ್ರಹಿಸಿದೆ.

ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಆರ್.ಡಿ. ಮಹೇಂದ್ರ, ಚಿಕ್ಕಮಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ದೇಶವಿರೋಧಿ ಹಾಗೂ ಸಮಾಜಘಾತುಕ ಕೃತ್ಯಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿ ಟಿಪ್ಪುನಗರದಲ್ಲಿ ಹಾಕಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬ್ಯಾನರ್‌ಗೆ ಪಾಕಿಸ್ತಾನಕ್ಕೆ ಸಂಬಂಧಿಸಿದ ಹಾಡನ್ನು ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ಕೃತ್ಯವನ್ನು ಕೇವಲ ಕಿಡಿಗೇಡಿಗಳ ಕೃತ್ಯ ಎಂದು ಪರಿಗಣಿಸದೆ ಸಮಗ್ರವಾಗಿ ತನಿಖೆ ನಡೆಸಬೇಕು. ಒಬ್ಬರು ಹಾಕಿದ ಪೋಸ್ಟ್ ಅನ್ನು ಹಲವು ಮಂದಿ ಹಂಚಿಕೊಂಡಿದ್ದು, ಲೈಕ್ ಮಾಡಿರುವುದರಿಂದ ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ದೇಶದ ವಿವಿಧೆಡೆ ನಡೆದಿರುವ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದ ತನಿಖೆಗಳು ಹಾಗೂ ಬಂಧನಗಳ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಕೇಳಿಬಂದಿರುವ ಪಾಕಿಸ್ತಾನ ಪರವಾದ ಘೋಷಣೆಗಳು ಮತ್ತು ಸಾಮಾಜಿಕ ಜಾಲತಾಣದ ಚಟುವಟಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣಕ್ಕೂ ದೇಶಾದ್ಯಂತ ನಡೆಯುತ್ತಿರುವ ದೇಶವಿರೋಧಿ ಚಟುವಟಿಕೆಗಳಿಗೂ ಯಾವುದೇ ಸಂಬಂಧವಿದೆಯೇ ಎಂಬುದನ್ನು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣವನ್ನು UಂPಂ ಕಾಯ್ದೆಯಡಿ ದಾಖಲಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸುವಂತೆ ಹಿಂದೂ ಹಿತರಕ್ಷಣಾ ವೇದಿಕೆ ಒತ್ತಾಯಿಸುತ್ತಿದೆ ಎಂದು ತಿಳಿಸಿದರು. ಚಿಕ್ಕಮಗಳೂರಿನಲ್ಲಿ ನಡೆದಿರುವ ಪಾಕಿಸ್ತಾನ ಪರವಾದ ಕೃತ್ಯವನ್ನು ಖಂಡಿಸಿ ಹಾಗೂ ಘಟನೆಯ ಹಿನ್ನೆಲೆಯಲ್ಲಿ ಸಮಾಜದಲ್ಲಿ ಉಂಟಾಗಿರುವ ಆತಂಕದ ವಾತಾವರಣವನ್ನು ದೂರ ಮಾಡುವ ಉದ್ದೇಶದಿಂದ ಆಗಸ್ಟ್ ೨೬ರಂದು ‘ಚಿಕ್ಕಮಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಶೃಂಗೇರಿ, ಕೊಪ್ಪ, ತರೀಕೆರೆ ಹಾಗೂ ಕಳಸದಿಂದ ಬೆಳಿಗ್ಗೆ ೯ ಗಂಟೆಗೆ ಪ್ರತಿಭಟನಾಕಾರರು ಹೊರಟು, ಕಡೂರು ಮತ್ತು ಮೂಡಿಗೆರೆ ಮೂಲಕ ಮಧ್ಯಾಹ್ನ ೧೨ ಗಂಟೆಗೆ ಚಿಕ್ಕಮಗಳೂರು ನಗರ ತಲುಪಲಿದ್ದಾರೆ. ಬಳಿಕ ನಗರದ ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೆ ತ್ರಿವರ್ಣ ಧ್ವಜಗಳೊಂದಿಗೆ ಮೆರವಣಿಗೆ ನಡೆಯಲಿದೆ. ಆಜಾದ್ ಪಾರ್ಕ್ ವೃತ್ತದಲ್ಲಿ ಬೃಹತ್ ರಾಷ್ಟ್ರಭಕ್ತರ ಸಭೆ ನಡೆಯಲಿದೆ ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments