Thursday, February 12, 2026
Homeಕ್ರೈಮ್ಕಡೂರು ʼಕೈʼ ಶಾಸಕ ಪಿಎ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್ ಬರೆದಿಟ್ಟು ಸರ್ಕಾರಿ ನೌಕರ ನಾಪತ್ತೆ!

ಕಡೂರು ʼಕೈʼ ಶಾಸಕ ಪಿಎ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್ ಬರೆದಿಟ್ಟು ಸರ್ಕಾರಿ ನೌಕರ ನಾಪತ್ತೆ!

ಚಿಕ್ಕಮಗಳೂರು: ಕಡೂರು ಕಾಂಗ್ರೆಸ್ ಶಾಸಕ ಕೆ.ಎಸ್.ಆನಂದ್ ಪಿಎ ಕಿರುಕುಳಕ್ಕೆ ಬೇಸತ್ತು ಸರ್ಕಾರಿ ನೌಕರರೊಬ್ಬರು ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದಾರೆ.

ಕಡೂರು ತಾಲೂಕು ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಇಕ್ಬಾಲ್ ನಾಪತ್ತೆಯಾಗಿದ್ದಾರೆ. ಶಾಸಕ ಕೆ.ಎಸ್.ಆನಂದ್ ಅವರ ಆಪ್ತ ಸಹಾಯಕ ಮಂಜುನಾಥ್, ತಹಶೀಲ್ದಾರ್ ಪೂರ್ಣಿಮಾ ಹಾಗೂ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶಿವಕುಮಾರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಕಲ್ಲೇಶ್ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ.

ಡೆತ್‌ನೋಟ್‌ನಲ್ಲಿ ನಾಲ್ವರ ಕಿರುಕುಳ ಸಹಿಸಲಾಗದೇ ಕುಟುಂಬ ಸಮೇತರಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನನ್ನ ಸಾವಿಗೆ ಕಾರಣಕರ್ತರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿ ಉಲ್ಲೇಖಿಸಿದ್ದಾರೆ.

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments

error: Content is protected !!