Thursday, September 3, 2026
Homeಜಿಲ್ಲಾಸುದ್ದಿಸಾರಿಗೆ ಬಸ್–ಬೊಲೆರೋ ಪಿಕಪ್ ಮುಖಾಮುಖಿ ಡಿಕ್ಕಿ: ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ

ಸಾರಿಗೆ ಬಸ್–ಬೊಲೆರೋ ಪಿಕಪ್ ಮುಖಾಮುಖಿ ಡಿಕ್ಕಿ: ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ

Telegram Group
Join Now

ಸಕಲೇಶಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೊಲೆರೋ ಪಿಕಪ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಮಾರನಹಳ್ಳಿ ಸಮೀಪ ಗುರುವಾರ ನಡೆದಿದೆ.

ಮೃತರನ್ನು ದಿನೇಶ್ (38) ಎಂದು ಗುರುತಿಸಲಾಗಿದ್ದು, ಸುಬ್ರಮಣ್ಯ, ವೆಂಕಟರಮಣ, ಜಿತೇಂದ್ರ ಹಾಗೂ ದುರ್ಗಾಪ್ರಸಾದ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಕಲೇಶಪುರದ ಕ್ರಾಫರ್ಡ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಐಸಿಐಸಿಐ ಬ್ಯಾಂಕ್‌ಗೆ ಸೇರಿದ ಬೊಲೆರೋ ಪಿಕಪ್ ವಾಹನವು ಎಟಿಎಂಗಳಿಗೆ ಹಣ ತುಂಬಲು ತೆರಳುತ್ತಿತ್ತು. KA-50-B-7283 ನೋಂದಣಿ ಸಂಖ್ಯೆಯ ಪಿಕಪ್ ಹಾಗೂ ಮಂಗಳೂರಿನಿಂದ ಬೆಂಗಳೂರಿನತ್ತ ತೆರಳುತ್ತಿದ್ದ KA-19-F-3447 ನೋಂದಣಿ ಸಂಖ್ಯೆಯ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದೆ.

ಗಾಯಾಳುಗಳು ಕೊಡಗು ಹಾಗೂ ಮಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಪಿಕಪ್ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.

ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments