Saturday, August 8, 2026
Homeಕ್ರೈಮ್ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಒಬ್ಬನ ಸ್ಥಿತಿ ಗಂಭೀರ

Telegram Group
Join Now

ಮೂಡಿಗೆರೆ: ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ ಹತ್ತನೇ ತಿರುವು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಪಘಾತದ ಪರಿಣಾಮವಾಗಿ ವಾಹನದಲ್ಲಿದ್ದ ಒಂಬತ್ತು ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.


ಘಾಟ್ ರಸ್ತೆಯ ಅಪಾಯಕಾರಿ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments