ಉಡುಪಿ: ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಮುಗಿದಿದ್ದು ಮತದಾರ ಯಾರ ಕಡೆ ಒಲವು ತೋರಿದ್ದಾನೆ ಎಂಬುದನ್ನ ತಿಳಿಯಲು ಫಲಿತಾಂಶಕ್ಕೆ ಕಾಯಬೇಕಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಕ್ಕೂ ಪ್ರತಿಷ್ಠೆಯ ಕಣವಾಗಿರುವ ಕ್ಷೇತ್ರದಲ್ಲಿ ಈಗಾಗಲೇ ಸೋಲು ಗೆಲುವಿನ ಲೆಕ್ಕಾಚಾರ ಜೋರಾಗಿ ನಡೀತಿದೆ.

ಸದ್ಯ ಅಭ್ಯರ್ಥಿಗಳ ಭವಿಷ್ಯ ಸ್ಟ್ರಾಂಗ್ ರೂಂನಲ್ಲಿ ಭದ್ರವಾಗಿದೆ. ಉಡುಪಿಯ ಸೈಂಟ್ ಸಿಸಿಲೀಸ್‌ನಲ್ಲಿರುವ ಸ್ಟ್ರಾಂಗ್ ರೂಮ್ ಗೆ ಮೂರು ಹಂತದಲ್ಲಿ ಭದ್ರತೆ ಒದಗಿಸಲಾಗುತ್ತಿದೆ. ಮೊದಲನೇ ಹಂತದಲ್ಲಿ ಸೆಂಟರ್ ಆರ್ಮ್ಡ್ ಪೊಲೀಸ್ ಫೋರ್ಸ್, ಎರಡನೇ ಹಂತದಲ್ಲಿ ಕೆಎಸ್‌ಆರ್‌ಪಿ, ಮೂರನೇ ಹಂತದಲ್ಲಿ ಜಿಲ್ಲೆಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಸುತ್ತಲೂ ಸಿಸಿಟಿವಿ ಅಳವಡಿಸಲಾಗಿದೆ. ಇನ್ನು ಭದ್ರತೆಗೆ ನಿಯೋಜನೆಗೊಂಡಿರುವ ಸಿಬ್ಬಂದಿ ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. ನಿನ್ನೆಯೇ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಇವಿಎಂಗಳು ಸ್ಟ್ರಾಂಗ್ ರೂಂ ಸೇರಿದ್ದು, ಸುತ್ತಲೂ ಖಾಕಿ ಕಣ್ಗಾವಲು ಇರಿಸಿದೆ.