ಉಡುಪಿ: ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಾರ್ಕಾಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಉದ್ಯೋಗ ಒದಗಿಸುವ ಭರವಸೆಯನ್ನು ಸರ್ಕಾರ ನೀಡುತ್ತದೆ. ಒಳಮೀಸಲಾತಿಯ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು. ಪ್ರಸ್ತುತ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದರು.
ಅನೆದಾಳಿ:ಬ್ಯಾರಿಕೇಡ್ ನಿರ್ಮಾಣಕ್ಕೆ ಕ್ರಮ
ಚಿಕ್ಕಮಗಳೂರಿನಲ್ಲಿ ಅನೆ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಉತ್ತರಿಸುತ್ತಾ, ಅನೆ, ಚಿರತೆ ಮತ್ತು ಹುಲಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ, ಮಾನವ ವನ್ಯಪ್ರಾಣಿ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ವನ್ಯಜೀವಿಗಳು ಜನಪ್ರದೇಶಗಳಿಗೆ ಬರದಂತೆ ಕಾಡಂಚಿನ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ಯಾರಿಕೇಡ್ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ ಎಂದರು.
