ಹಾಸನ: ಜಿಲ್ಲೆಯಲ್ಲಿ ಕಾಡಾನೆ-ಮಾನವನ ನಡುವಿನ ಸಂಘರ್ಷ ಮುಂದುವರೆದಿದ್ದು, ಇದೀಗ ಕಾಡಾನೆ ದಾಳಿಗೆ ರೈತ ಬಲಿಯಾಗಿರುವಂತಹ ಘಟನೆ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ನಡೆದಿದೆ.

ಹೌದು .. ಕಾಡಾನೆ ದಾಳಿಯಿಂದ ಕಣಗುಪ್ಪೆ ಗ್ರಾಮದ ನಿವಾಸಿ ರಾಜಶೆಟ್ಟಿ (65) ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ತೋಟಕ್ಕೆ ತೆರಳಿದ್ದ ವೇಳೆ ಪೊದೆಯೊಳಗೆ ಅಡಗಿ ಕುಳಿತಿದ್ದ ಕಾಡಾನೆ ಏಕಾಏಕಿ ದಾಳಿ ನಡೆಸಿ ಹತ್ಯೆ ಮಾಡಿದೆ.
ಮೃತ ರಾಜಶೆಟ್ಟಿ ಇಂದು ತೋಟಕ್ಕೆ ತೆರಳಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದಲ್ಲದೇ ಸೊಂಡಿಲಿನಿಂದ ಎತ್ತಿ ಬಿಸಾಡಿ ತುಳಿದು ಸಾಯಿಸಿದ ಅದು ಸಾಲದು ಅಂತ ನಂತರ ಮೃತ ವ್ಯಕ್ತಿಯ ಮೇಲೆ ಕಾಫಿ ಗಿಡಗಳಿಂದ ಮುಚ್ಚಿ ಹಾಕಿ ಆ ನಂತರ ಮೃತದೇಹದ ಸಮೀಪದಲ್ಲೇ ನಿಂತಿದ್ದ ಒಂಟಿ ಸಲಗ ಇದರಿಂದ ಗ್ರಾಮಸ್ಥರಲ್ಲಿ ಮತ್ತಷ್ಟು ಭೀತಿ, ಆತಂಕ ಹೆಚ್ಚಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅರಣ್ಯಾಧಿಕಾರಿಗಳು ಕಾಡಾನೆಯನ್ನು ಅಲ್ಲಿಂದ ಓಡಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಜನರು ನಿತ್ಯ ಭಯದಲ್ಲಿ ಜೀವನ ನಡೆಸುತ್ತಿದ್ದು ತುರ್ತಾಗಿ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕಲು ಮುಂದಾಗಿ ಎಂದು ಆಗ್ರಹಿಸಿದ್ದಾರೆ.
