ಹಾಸನ : ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಮೂಗಲಿ ಗ್ರಾಮದಲ್ಲಿ ನಡೆದಿದೆ.
ಹೌದು .. ಶೋಭ (40) ಮೃತಪಟ್ಟ ಮಹಿಳೆ. ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿದ ಕಾಡಾನೆ ಮಹಿಳೆಯನ್ನು ತುಳಿದು ಸಾಯಿಸಿದೆ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ನಿಲ್ಲದ ಮಾನವ ಹಾಗೂ ವನ್ಯಜೀವಿ ನಡುವಿವ ಸಂಘರ್ಷ ಇದೇ ರೀತಿ ಆದರೆ ಜನರು ಹೇಗೆ ಬದುಕುವುದು ಇದಕ್ಕೊಂದು ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.
