ಶಿವಮೊಗ್ಗ : ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಮೊಗ್ಗದ ತಮ್ಮ ಮನೆಯಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ ನ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ನಿಗಮದಲ್ಲಿ 187 ಕೋಟಿ ಹಗರಣಕ್ಕೆ ಬೇಸತ್ತು ಈ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಡೆತ್ ನೋಟ್ ಬರೆದು ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಪದ್ಮಾನಾಭ, ಪರಶುರಾಮ್, ಶುಚಿತ್ವ ಅಧಿಕಾರಿಗಳೇ ನನ್ನ ಸಾವಿಗೆ ಕಾರಣ ಎಂದು ಅವರು ಡೆತ್ ನೋಟ್ ನಲ್ಲಿ ಬರೆದಿದ್ದಾರೆ. 6 ಪುಟಗಳ ಡೆತ್ ನೋಟ್ ಬರೆದು ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದು, ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
